ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು  ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ  ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ ಮಕ್ಕಳು ಮೀನು ಹೆಕ್ಕುವ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಈ ಹಿಂದೆ ದಾಳಿ ನಡೆಸಿದರೂ ಕಡಿವಾಣ ಹಾಕಲು ಸಾಧ್ಯವಾಗಿಲ್ಲ.  ಕಾರ್ಯಪಡೆಯ ಸದಸ್ಯರುಗಳು ಆಗಿಂದಾಗ್ಗೆ ನಿರಂತರ ಅನಿರೀಕ್ಷಿತ ದಾಳಿ ಹಾಗೂ ಭೇಟಿಗಳನ್ನು ಮಾಡುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಸೂಚನೆ ನೀಡಿದರು.

ಬಾಲ ಕಾರ್ಮಿಕತೆ ಮಕ್ಕಳ ಬಾಲ್ಯ, ಅವರ ಸಾಮರ್ಥ್ಯ, ಘನತೆ ಕಸಿದುಕೊಳ್ಳುವ ಹಾಗೂ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೈತಿಕವಾಗಿ ಹಾನಿಕಾರವಾಗುತ್ತದೆ. ಆದ್ದರಿಂದ ಅವರುಗಳು ಶಿಕ್ಷಣವಂತರಾಗಬೇಕು. ಉತ್ತಮ ವಿದ್ಯಾವಂತರಾಗಿ ಭವಿಷ್ಯ ರೂಪಿಸಿಕೊಳ್ಳಬೇಕು. ಆದರೆ ವಿವಿಧ ಕಾರಣಗಳಿಂದಾಗಿ ಮಕ್ಕಳು ಶಾಲೆಯನ್ನು ಬಿಟ್ಟು ದುಡಿಮೆಗೆ ಮುಂದಾಗುತ್ತಾರೆ. ಇದನ್ನು ತಪ್ಪಿಸಬೇಕಿದೆ ಎಂದರು.

ಸಮಾಜದಲ್ಲಿ ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಪೋಷಕರುಗಳಿಗೆ ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುವುದರ ಜೊತೆಗೆ 14 ವರ್ಷ ದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಶಾಲೆಗೆ ಹೋಗುವುದನ್ನು ತಪ್ಪಿಸಬಾರದು. ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

Click here

Click here

Click here

Click Here

Call us

Call us

ಬಾಲ ಕಾರ್ಮಿಕ ವೃತ್ತಿಯಲ್ಲಿ ತೊಡಗಿಸಿಕೊಂಡ ಯಾವುದೇ ಒಬ್ಬ ವ್ಯಾಪಾರಿ ಅಥವಾ ಉದ್ಯಮಿ ವಿರುದ್ಧ ಕಾನೂನಿನ ಅನ್ವಯ ತಪ್ಪದೇ ಪ್ರಕರಣ ದಾಖಲಿಸಿ, ಅವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದ ಅವರು, ಕೆಲವು ಮಕ್ಕಳು ಹೆಚ್ಚು ಕಾಲ ದುಡಿಸಿಕೊಳ್ಳಬೇಕೆಂಬ ಮನೋಭಾವದಿಂದ ವೃತ್ತಿಗೆ ಸೇರಿಸಿಕೊಳ್ಳುತ್ತಾರೆ. ಅವರಿಗೆ ಕಾನೂನಿನ ಭಯವೇ ಇರುವುದಿಲ್ಲ. ಇಂತಹವರ ವಿರುದ್ಧ ಪ್ರಕರಣ ದಾಖಲಿಸುವುದರ ಜೊತೆಗೆ ಅವರುಗಳ ಪರವಾನಿಗೆಯನ್ನು ಸ್ಥಳೀಯ ಸಂಸ್ಥೆಗಳು ರದ್ದುಗೊಳೀಸಬೇಕು ಎಂದು ಸೂಚನೆ ನೀಡಿದರು.

ಶಾಲೆಗೆ ಹೋಗದೇ ಕೆಲವು ಮಕ್ಕಳು ಪೋಷಕರ ಜೊತೆಯಲ್ಲಿ ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಬೆಳಗ್ಗಿನಿಂದ ಸಂಜೆಯ ವರೆಗೆ ಕಾಲ ಕಳೆಯುತ್ತಾರೆ. ಅಂತಹವರು ಕಂಡು ಬಂದಲ್ಲಿ ಪೋಷಕರಿಗೆ ಮಕ್ಕಳನ್ನು ಶಾಲೆಗೆ ಸೇರಿಸಲು ತಿಳಿ ಹೇಳಬೇಕು. ಕಳೆದ ಒಂದು ವರ್ಷದಲ್ಲಿ 111 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇವರಲ್ಲಿ ಕೆಲವರು ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬಂದವರಾಗಿದ್ದು, ಇವರುಗಳು ಶಾಲೆಗೆ ಹೋಗುವಂತೆ ನಿಗಾ ವಹಿಸಬೇಕು. 

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್, ಪೌರಾಯುಕ್ತ ರಾಯಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಬಾಲಕಾರ್ಮಿಕ ಯೋಜನ ಸಂಘದ ನಿರ್ದೇಶಕಿ ಅಮೃತ, ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply