ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ವಿದ್ಯಾರ್ಥಿಗಳಿಂದ ವೆಬ್‌ಸೈಟ್  https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ : 0820-2574596 ಅಥವಾ ಕಾರ್ಕಳ ದೂರವಾಣಿ : 08258-231101 ಹಾಗೂ ಕುಂದಾಪುರ ದೂರವಾಣಿ : 08254-230370  ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply