ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.