ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿಯು ಆರಂಭಗೊಂಡಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯು ದೂರದರ್ಶಿತ್ವದ ನಾಯಕ ಡಾ. ಟಿ.ಎಂ.ಎ. ಪೈ ಅವರ ಸಮರ್ಪಣೆ ಮತ್ತು ಸಮಾಜ ಸೇವೆಯಲ್ಲಿ ಬದ್ಧತೆ ಅಸಾಧಾರಣವಾಗಿ ಅಪರೂಪ. ಅವರ ಕನಸನ್ನು ನನಸಾಗಿಸುವಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವಂತೆ ಮಾಡುವುದು ಈ ಕಾರ್ಡ್‌ನ ಉದ್ದೇಶವಾಗಿದೆ. ಮಣಿಪಾಲ್ ಆರೋಗ್ಯ ಕಾರ್ಡ್ “ಇಡೀ ಕುಟುಂಬಕ್ಕಾಗಿ, ಉತ್ತಮ ಮೌಲ್ಯ, ವಿಶ್ವಾಸಾರ್ಹ ಸೇವೆ ” ಎಂಬ ಅಡಿಬರಹದ ಅಡಿಯಲ್ಲಿ, ಎಲ್ಲಾ ಸದಸ್ಯರಿಗೆ ಸಮಗ್ರ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಹೇಳಿದರು.
ಅವರು ಅ.15ರಂದು ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ಮಾಹೆಯ ಕುಲಾಧಿಪತಿ ಡಾ. ರಾಮದಾಸ್ ಪೈ ಅವರ ನೇತೃತ್ವದಲ್ಲಿ 2000ರಲ್ಲಿ ಪ್ರಾರಂಭವಾದ ಮಣಿಪಾಲ್ ಆರೋಗ್ಯ ಕಾರ್ಡ್ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿಆರೋಗ್ಯ ಸೇವೆಯನ್ನು ಒದಗಿಸಲು ಶ್ರಮಿಸುತ್ತಿದೆ. ಉಚಿತ ಆರೋಗ್ಯ ಸೇವೆಯನ್ನು ನೀಡುವುದು ಸವಾಲಿನದ್ದಾಗಿದ್ದರೂ, ಈ ಉಪಕ್ರಮವು ರಿಯಾಯಿತಿ ವೆಚ್ಚದಲ್ಲಿ ಆರೋಗ್ಯ ಸೇವೆಯನ್ನು ಖಚಿತಪಡಿಸುತ್ತದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಂಭವಾಗಿ ಕರಾವಳಿ ಮತ್ತು ಮಧ್ಯ ಕರ್ನಾಟಕದ 12-15 ಜಿಲ್ಲೆಗಳಿಗೆ ವಿಸ್ತರಣೆಗೊಂಡಿದೆ.ಕಳೆದ 23 ವರ್ಷಗಳಲ್ಲಿ, ಮಣಿಪಾಲ್ ಆರೋಗ್ಯ ಕಾರ್ಡ್ ಲಕ್ಷಾಂತರ ಜನರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿದೆ, 2023 ರಲ್ಲಿ 3,60,000 ಸದಸ್ಯರು ನೋಂದಾಯಿಸಿಕೊಂಡಿದ್ದಾರೆ , ಇದು ಅದರ ಬೆಳೆಯುತ್ತಿರುವ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.
ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ , ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ ₹100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ ಎಂದರು.
ಕಾರ್ಡ್‌ದಾರರು ಕಸ್ತೂರ್ಬಾ ಆಸ್ಪತ್ರೆ – ಮಣಿಪಾಲ, ಡಾ. ಟಿ.ಎಂ.ಎ.ಪೈ ಆಸ್ಪತ್ರೆ-ಉಡುಪಿ, ಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ – ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ – ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು.
ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.
ಪತ್ರಿಕಾಗೋಷ್ಟಿಯಲ್ಲಿ ಪ್ರತಿನಿಧಿಯಾದ ಅಕ್ಷಯ್ ಕುಮಾರ್, ಭದ್ರಯ್ಯ ಕೋಟೇಶ್ವರ ಹಾಗೂ ರಕ್ಷಿತ್ ಕುಮಾರ್ ಶೆಟ್ಟಿ ವಂಡ್ಸೆ ಉಪಸ್ಥಿತರಿದ್ದರು.
2024ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಕುಂದಾಪುರ: ಭದ್ರಯ್ಯ – 9448872666, ನಾಗರಾಜ್ ಖಾರ್ವಿ – 9916888916, ವಂಡ್ಸೆ: ರಕ್ಷಿತ್ – 9743366746 ಸೈಂಟ್ ಮಿಲಾಗ್ರೇಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್- 8884459066.