ವಾಯುಭಾರ ಕುಸಿತ – ಕರಾವಳಿ ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆ ಸಾಧ್ಯತೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ,ಅ.15:
ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ.

Call us

Click Here

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಅಂಶಗಳನ್ನು ಮಳೆಗಾಲದ ಎಲ್ಲಾ ಸಂದರ್ಭಗಳಲ್ಲಿ ಚಾಚುತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು.

 ತುರ್ತುಸೇವೆಗೆ ಶುಲ್ಕರಹಿತ ಸಂಖ್ಯೆ 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply