Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಗ್ರಾಮದ ಪ್ರತೀ ಮನೆಗಳ ಕಸಗಳನ್ನು ಸಂಗ್ರಹಿಸಿ: ಜಿಲ್ಲಾಧಿಕಾರಿ
    ಊರ್ಮನೆ ಸಮಾಚಾರ

    ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಗ್ರಾಮದ ಪ್ರತೀ ಮನೆಗಳ ಕಸಗಳನ್ನು ಸಂಗ್ರಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಗ್ರಾಮದ ಪ್ರತೀ ಮನೆಗಳ ಕಸಗಳನ್ನು ಸಂಗ್ರಹಿಸಿ ವಲೇ ಮಾಡಲು ಬೈಂದೂರು ಪಂಚಾಯತ್‌ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸ.ನಂ.176ರಲ್ಲಿ ಸುಮಾರು 8.06 ಎಕ್ರೆ ಸರ್ಕಾರಿ ಸ್ಥಳದಲ್ಲಿ ಸುಮಾರು 492.99 ಲಕ್ಷ ವೆಚ್ಚದಲ್ಲಿ ಘನತ್ಯಾಜ್ಯ ಸಂಸ್ಕರಣಾ ಮತ್ತು ವಿಲೇವಾರಿ ಘಟಕ ನಿರ್ಮಾಣವಾಗಲಿದೆ. ಇಲ್ಲಿ ಸಂಗ್ರಹಿಸಿದ ಕಸಗಳನ್ನು ವಿಂಗಡಿಸಿ (ಹಸಿ ಮತ್ತು ಒಣ) ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪಟ್ಟಣ ಪಂಚಾಯತ್‌ನ ಘಟಕ ನಿರ್ಮಾಣದ ಪ್ರಸ್ತಾವನೆಯಂತೆ ಯೋಜನೆಯ ಸಾಧಕ – ಬಾಧಕಗಳ ಚರ್ಚೆ ಕುರಿತು ನಡೆದ ಸಾರ್ವಜನಿಕ ಪರಿಸರ ಸಭೆಯಲ್ಲಿ ಮಾತನಡಿದರು.

    ಪ್ರಸ್ತುತ ಯೋಜನೆಯಲ್ಲಿ ಪರಿಸರ ಪರಿಣಾಮ ಮೌಲ್ಯ ಮಾಪನವು ಮುಖ್ಯವಾಗಿ ಪರಿಸರ ನಿರ್ವಹಣಾ ಯೋಜನೆಗೆ ಪ್ರಧಾನ ಒತ್ತು ನೀಡಲಾಗುತ್ತದೆ. ಸಭೆಗೆ ಆಗಮಿಸಿರುವ ಆಸಕ್ತ ಸ್ಥಳೀಯ ಸಾರ್ವಜನಿಕರ ಸಲಹೆ ಮತ್ತು ಅಭಿಪ್ರಾಯ ತಿಳಿದುಕೊಳ್ಳುವುದು ಒಂದು ಮುಖ್ಯ ಉದ್ದೇಶವಾಗಿರುವ ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ ಎಂದರು.

    ನಂತರ ತಾಂತ್ರಿಕ ವಿಭಾಗದ ಪ್ರಬಂಧಕ ಮುನಿರಾಜು ಮಾತನಾಡಿ, ಪ್ರಸ್ತುತ ಬೈಂದೂರು ಪಟ್ಟಣ ಪಂಚಾಯತಿಯಲ್ಲಿ 9.5 ಟನ್ ಅಷ್ಟು ಕಸ ಉತ್ಪಾದನೆಯಾಗುತ್ತಿದ್ದು, ಪಟ್ಟಣ ಪಂಚಾಯತಿ ವ್ಯಾಪ್ತಿಯ ಕಸವನ್ನು ಸಂಗ್ರಹಿಸಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ಸಣ್ಣ ಮಟ್ಟದಲ್ಲಿ ಗೊಬ್ಬರ ತಯಾರಿಸುತ್ತಿದೆ. ಮುಂದಿನ 20 ವರ್ಷಗಳಲ್ಲಿ ಕಸದ ಪ್ರಮಾಣ 25 ಟನ್ ಆಗುವುದಾಗಿ ಅಂದಾಜಿಸಿ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಣೆ ಮತ್ತು ವಿಲೇವಾರಿ ಘಟಕ ವಿನ್ಯಾಸವನ್ನು ಒಳಗೊಂಡ ಯೋಜನೆಯನ್ನು ತಯಾರು ಮಾಡಲಾಗಿದೆ. ಪರಿಸರ ಪರಿಣಾಮ ಮೌಲ್ಯಮಾಪನ 2006ರ ಅಧಿಸೂಚನೆ ಮತ್ತು ತಿದ್ದುಪಡಿಯನ್ವಯ ವರ್ಗಿಕೃತ ಪಟ್ಟಿಗೆ ಒಳಪಡುವ ಕೈಗಾರಿಕ ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಗುಣ ಬದಲಾವಣೆ ಸಚಿವಾಲಯದಿಂದ ಪರಿಸರ ಅನುಮತಿಯನ್ನು ಕಡ್ಡಾಯವಾಗಿ ಪಡೆಯಲಾಗಿದೆ. ಯೋಜನೆ ಸ್ಥಳದ ಸುತ್ತಲಿನ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಮತ್ತು ಆ ಪ್ರದೇಶದ ಪರಿಸರಾತ್ಮಕ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಮಗ್ರ ಪರಿಸರ ನಿರ್ವಹಣಾ ಯೋಜನೆಯನ್ನು ಸಿದ್ಧಪಡಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರಸ್ತುತ ಯೋಜನೆಯಿಂದ ಉಂಟಾಗಬಹುದಾದ ಪರಿಸರದ ಮೇಲಿನ ಪರಿಣಾಮಗಳ ಅಧ್ಯಯನ ಮಾಡಿರುವ ಬಗ್ಗೆ ವಿವರಣೆ ನೀಡಿದರು.

    25 ಟನ್ ಸೌಲಭ್ಯದ ಘನತ್ಯಾಜ್ಯ ಸಂಸ್ಕರಣ ಮತ್ತು ವಿಲೇವಾರಿಯ ಘಟಕವನ್ನು ನಿರ್ಮಿಸುವ ಪ್ರಸ್ತಾವನೆಯನ್ನು ಸ್ಥಳಿಯ ಹಲವರು ವಿರೋಧ ವ್ಯಕ್ತಪಡಿಸಿದರು. ಉತ್ತರಿಸಿದ ಡಿಸಿ, ಯಾವುದೇ ರೀತಿಯ ಸಮಸ್ಯೆ ಬರದಂತೆ ಈ ಘಟಕವು ಕಾರ್ಯನಿರ್ವಹಿಸಲಿದೆ. ಗ್ರಾಮಸ್ಥರು ತಿಳಿಸಿದಂತೆ ಸ.ನಂ 127 ಅನ್ನು ಕೂಡ ಪರಿಶೀಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

    Click here

    Click here

    Click here

    Call us

    Call us

    ಪರಿಸರ ರಕ್ಷಣೆ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದ ಅವರು ಮನವಿ ಮಾಡಿದರು. ಪರಿಸರ ಇಲಾಖೆ ಮಂಗಳೂರು ವಲಯಾಧಿಕಾರಿ ವಿಜಯಲಕ್ಷ್ಮೀ ಹೆಗಡೆ ಇದ್ದರು. ಜಿಲ್ಲಾ ಪರಿಸರ ಇಲಾಖಾಧಿಕಾರಿ ಕಿರ್ತಿಕುಮಾರ್ ಕಾರ್ಯಕ್ರಮ ನೊರ್ವಹಿಸಿದರು, ಪಪಂ ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕರ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.