ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಮಂಗಳೂರು, ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ ಇಲ್ಲಿನ ಶಿಕ್ಷಕರಿಗೆ ಸೈoಟ್ ಅಲೋಷಿಯಸ್ ಕಾಲೇಜು ಡೀಮಡ್ ಟು ಬಿ ಯೂನಿವರ್ಸಿಟಿ ಮಂಗಳೂರು ಇಲ್ಲಿನ ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಅಲಿಟಾ ಡೇಸ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಆಂಗ್ಲ ಭಾಷೆ ಮತ್ತು ಸಂವಹನ ಕುರಿತು ಒಂದು ದಿನದ ಕಾರ್ಯಾಗಾರವನ್ನು ನಡೆಸಿದರು.
ಆಂಗ್ಲ ಭಾಷೆಯ ಆಳ ಜ್ಞಾನವನ್ನು ಹೊಂದಿರುವ ಇವರು ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಅತ್ಯಂತ ಕ್ರಿಯಾಶೀಲರಾಗಿ ಚಟುವಟಿಕೆಗಳ ಮೂಲಕ ಶಿಕ್ಷಕರಿಗೆ ಭಾಷೆಯಲ್ಲಿ ಗೊಂದಲ ಮತ್ತು ಪರಿಹಾರ, ಶಬ್ದಗಳ ಬಳಕೆ, ವ್ಯಾಕರಣ, ಉಚ್ಚಾರ ದೋಷ, ಸಾಮಾನ್ಯ ಪದಗಳ ಪ್ರಯೋಗ ಮತ್ತು ಸ್ಪಷ್ಟತೆ, ತರಗತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಆಂಗ್ಲ ಭಾಷೆ ಸಂವಹನ ಇತ್ಯಾದಿಗಳ ಕುರಿತು ಉದಾಹರಣೆಯೊಂದಿಗೆ ಮನೋಜ್ಞವಾಗಿ ತಿಳಿಸಿದರು. ಎಲ್ಲಾ ಶಿಕ್ಷಕರು ತಮ್ಮನ್ನು ಸಂಪೂರ್ಣವಾಗಿ ಕ್ರಿಯಾಶೀಲತೆಯಿಂದ ಕಾರ್ಯಾಗಾರದಲ್ಲಿ ತೊಡಗಿಸಿಕೊಂಡು ಆಂಗ್ಲ ಭಾಷೆಯ ಕುರಿತು ಅತ್ಯಮೂಲ್ಯ ಮಾಹಿತಿಯನ್ನು ಪಡೆದರು.
ಸಂಸ್ಥೆಯ ಆಡಳಿತಾಧಿಕಾರಿಗಳಾದ ಶಮಿತಾ ರಾವ್, ರೆನಿಟಾ ಲೋಬೊ ಮತ್ತು ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಜಂಟಿಯಾಗಿ ದೀಪ ಬೆಳಗಿಸಿ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
ಶಿಕ್ಷಕ ರಾಮ ದೇವಾಡಿಗ ಮತ್ತು ಸಂಗಡಿಗರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶಿಕ್ಷಕಿ ಅವಿನಾ ಡಿಸೋಜಾ ಸ್ವಾಗತಿಸಿ, ಶಿಕ್ಷಕಿ ಸುರೇಖಾ ವಂದಿಸಿ, ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು.