Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಬಂದರು ಹಾಗೂ ಅಳಿವೆಯಲ್ಲಿ ತುರ್ತು ಹೂಳೆತ್ತುಲು ಮೀನುಗಾರಿಕೆ ಸಚಿವರಿಗೆ ಮನವಿ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಬಂದರು ಹಾಗೂ ಅಳಿವೆಯಲ್ಲಿ ತುರ್ತು ಹೂಳೆತ್ತುಲು ಮೀನುಗಾರಿಕೆ ಸಚಿವರಿಗೆ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಹಾಗೂ ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾರ್ಯ ನಡೆಸಬೇಕೆಂದು ಗಂಗೊಳ್ಳಿಯ ಹಸಿ ಮೀನು ವ್ಯಾಪರಸ್ಥರ ಮತ್ತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿಯೋಗ ರಾಜ್ಯದ ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

    Click Here

    Click Here

    Call us

    Click Here

    ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವ ಮಂಕಾಳು ವೈದ್ಯ ಅವರು, ಹೂಳೆತ್ತುವ ಬಗ್ಗೆ ಇಲಾಖೆ ಅಧಿಕಾರಿಗಳ ಮೂಲಕ ವರದಿ ತರಿಸಿಕೊಂಡು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಚಿವರ ಸೂಚನೆ ಮೇರೆಗೆ ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಜೆಇ ಭಾನುಪ್ರಕಾಶ್ ಅವರು ಬಂದರು ಹಾಗೂ ಅಳಿವೆ ಪ್ರದೇಶವನ್ನು ವೀಕ್ಷಿಸಿ ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾಮಗಾರಿ ಪ್ರಾರಂಭಿಸುವ ಬಗ್ಗೆ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಕಳೆದ ನವೆಂಬರ್ ತಿಂಗಳಿನಲ್ಲಿ ಸುಮಾರು 4.6 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಅಳಿವೆ ಹಾಗೂ ಜೆಟ್ಟಿ ಪ್ರದೇಶದಲ್ಲಿ ಹೂಳೆತ್ತುವ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ. ಮೀನುಗಾರರ ನಿರೀಕ್ಷೆಗೆ ತಕ್ಕಂತೆ ಡ್ರಜ್ಜಿಂಗ್ ಕಾಮಗಾರಿ ನಡೆದಿಲ್ಲ, ಗಂಗೊಳ್ಳಿ ಬಂದರಿಗೆ ಬರುವ ದಾರಿಯಲ್ಲಿ ಡ್ರಜ್ಜಿಂಗ್ ಮಾಡುವುದು ಬಿಟ್ಟು ಕೋಡಿಗೆ ಹೋಗುವ ದಾರಿಯಲ್ಲಿ ಡ್ರಜ್ಜಿಂಗ್ ಮಾಡಲಾಗಿದೆ ಎಂದು ಸ್ಥಳೀಯ ಮೀನುಗಾರರು ಆರೋಪಿಸಿದರು.

    ಗಂಗೊಳ್ಳಿ ಅಳಿವೆಯಲ್ಲಿ ಹಿಟಾಚಿ ಮೂಲಕ ಹೂಳೆತ್ತಿ ಬಾರ್ಜ್ ಮೂಲಕ ತೆಗೆದ ಹೂಳನ್ನು ಅಳಿವೆಯಿಂದ ಸ್ವಲ್ಪ ದೂರದಲ್ಲಿ ಹಾಕಿರುವುದು ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ. ಅಳಿವೆಯಲ್ಲಿ ತೆಗೆದ ಹೂಳನ್ನು ಗಂಗೊಳ್ಳಿ ಬಂದರಿಗೆ ಬರುವ ದಾರಿಯುದ್ದಕ್ಕೂ ಹಾಕುತ್ತಾ ಹೋಗಿರುವುದರಿಂದ ಅಲ್ಲಲ್ಲಿ ಮರಳು ದಿಬ್ಬಗಳು ಸೃಷ್ಟಿಯಾಗಿದೆ. ಇದರಿಂದ ಪರ್ಸಿನ್ ಮತ್ತು ಫಿಶಿಂಗ್ ಬೋಟುಗಳು ಹಾಗೂ ದೋಣಿಗಳು ಗಂಗೊಳ್ಳಿ ಬಂದರು ಪ್ರವೇಶಿಸಲು ಕಷ್ಟವಾಗುತ್ತಿದ್ದು, ಅಳಿವೆಯಲ್ಲಿ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆಗಳಿವೆ.

    ಮೀನುಗಾರರಿಗೆ ಕಂಟಕವಾಗಿ ಪರಿಣಮಿಸುತ್ತಿರುವ ಗಂಗೊಳ್ಳಿ – ಕೋಡಿ ಅಳಿವೆ ಪ್ರದೇಶದಲ್ಲಿ ಸರಿಯಾದ ರೀತಿಯಲ್ಲಿ ಹೂಳೆತ್ತುವ ಕಾರ್ಯ ನಡೆಸಬೇಕು ಎಂದು ಒತ್ತಾಯಿಸಿದರು.

    Click here

    Click here

    Click here

    Call us

    Call us

    ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಮೀನುಗಾರ ಮುಖಂಡರಾದ ರಾಮಪ್ಪ ಖಾರ್ವಿ, ರಾಘವೇಂದ್ರ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಧಿಕಾರಿಗಳಿಂದ ಬೈಂದೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮೂಲೆಗುಂಪು: ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ

    23/10/2026

    ನಾಡೋಜ ಜಿ. ಶಂಕರ್ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲು ಆಗ್ರಹ: ಕೆ. ವಿಕಾಸ್ ಹೆಗ್ಡೆ

    23/10/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿಗಳು ಯುವ ಸಂಸತ್ತು – 2026ರ ಜಿಲ್ಲಾಮಟ್ಟಕ್ಕೆ ಆಯ್ಕೆ

    23/10/2026
    Leave A Reply Cancel Reply

    nineteen − 7 =

    Call us

    Click Here

    Call us

    Call us

    Call us
    Highest Viewed Recently
    • ಅಧಿಕಾರಿಗಳಿಂದ ಬೈಂದೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮೂಲೆಗುಂಪು: ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ
    • ನಾಡೋಜ ಜಿ. ಶಂಕರ್ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲು ಆಗ್ರಹ: ಕೆ. ವಿಕಾಸ್ ಹೆಗ್ಡೆ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿಗಳು ಯುವ ಸಂಸತ್ತು – 2026ರ ಜಿಲ್ಲಾಮಟ್ಟಕ್ಕೆ ಆಯ್ಕೆ
    • ಕುಸ್ತಿ ಪಂದ್ಯಾಟದಲ್ಲಿ ಸ್ವಸ್ತಿಕ್‌ ಪೂಜಾರಿಗೆ ಬೆಳ್ಳಿ ಪದಕ
    • ಕುಸ್ತಿ ಪಂದ್ಯಾಟದಲ್ಲಿ ಮೂಡ್ಲಕಟ್ಟೆಯ ವಿದ್ಯಾರ್ಥಿಗಳಾದ ಪ್ರಣೀತ್‌ಗೆ ಕಂಚು ಮತ್ತು ಹರ್ಷಿಣಿಗೆ ಬೆಳ್ಳಿ ಪದಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.