ಪಂಚವರ್ಣದ ಸಮಾಜಮುಖಿ ಕಾರ್ಯವೇ ಮಾದರಿ: ಜಿಲ್ಲಾಧಿಕಾರಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಸಂಘಸಂಸ್ಥೆಗಳು ನಿತ್ಯನಿರಂರರವಾಗಿ ಸಾಮಾಜಿಕ ಕಳಕಳಿಯೊಂದಿಗೆ ಪರಿಸರವನ್ನು ಪ್ರೀತಿಸಿ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರಬೇಕು ಈ ದಿಸೆಯಲ್ಲಿ ಪಂಚವರ್ಣದ ಸಮಾಜಮುಖಿ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ನುಡಿದರು.

Call us

Click Here

ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಇದೇ ಬರುವ ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಪಂಚವರ್ಣದ ಪರಿಸರ ಸಂಬಂಧಿಸಿದ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ದತ್ತು ಪಡೆಯುವ ವಿವಿಧ ವಿಶೇಷ ಕಾರ್ಯಕ್ರಮಗಳು ಜನಸಾಮಾನ್ಯರ ಮನಮುಟ್ಟುವಂತ್ತಾಗಿದೆ. ಜಿಲ್ಲಾಡಳಿತ ಹಮ್ಮಿಕೊಂಡ ಹೆಚ್ಚಿನ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಇಂತಹ ಸಂಸ್ಥೆಯ ರಾಜ್ಯೋತ್ಸವ ಕಾರ್ಯಕ್ರಮಗಳು ಹೊಸತನ ಹೊಸತೇರಾಗಿ ಸಂಭ್ರಮಿಸಲಿ ಎಂದು ಹಾರೈಸಿದರು.

ಮುಖ್ಯ ಅಭ್ಯಾಗತರಾಗಿ ಉಡುಪಿಯ ಪ್ರಸಿದ್ಧ ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ. ಶೆಟ್ಟಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಮಣೂರು ಫ್ರೆಂಡ್ಸ್ ನಿಕಟಪೂರ್ವ ಅಧ್ಯಕ್ಷ ದಿನೇಶ್ ಆಚಾರ್, ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಅಧ್ಯಕ್ಷೆ ವನೀತಾ ಉಪಾಧ್ಯಾ, ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ನಿರ್ವಹಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಪೋಸ್ಟರ್‌ನ್ನು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಬಿಡುಗಡೆಗೊಳಿಸಿದರು. ಉಡುಪಿಯ ಪ್ರಸಿದ್ಧ ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ. ಶೆಟ್ಟಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಮತ್ತಿತರರು ಇದ್ದರು.

Click here

Click here

Click here

Click Here

Call us

Call us

Leave a Reply