ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಹಳಗೇರಿ ಗ್ರಾಮದ ನಿವಾಸಿ ಹೊನ್ನಾವರ ತಾಲೂಕು ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಂಜುನಾಥ ಶೆಟ್ಟಿ (58) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು.
ಡಾ. ಮಂಜುನಾಥ ಶೆಟ್ಟಿ ಭಟ್ಕಳ ಸೇರಿದಂತೆ ವಿವಿಧ ತಾಲೂಕು ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ 6 ವರ್ಷಗಳಿಂದ ಹೊನ್ನಾವರದ ತಾಲೂಕು ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದರು. ಅವರು ಯಕ್ಷಗಾನ ಹವ್ಯಾಸಿ ಕಲಾವಿದರಾಗಿಯೂ ಗಮನ ಸೆಳೆದಿದ್ದರು.
ಅವರು ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರು ಹಾಗೂ ಬಂದುಗಳನ್ನು ಅಗಲಿದ್ದಾರೆ.