ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಘಟಕದ ವತಿಯಿಂದ ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕಾಮನ್ ವೆಲ್ತ್ ನ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಸತೀಶ್ ಖಾರ್ವಿ ಅವರು ‘ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್ ಬಳಕೆಯಿಂದ ದೂರ ಸರಿದು ಹೆಚ್ಚು ಸಮಯವನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರಧ್ವಜವನ್ನು ರಾಷ್ಟ್ರಗೀತೆಯೊಂದಿಗೆ ತನ್ನ ಹೆಗಲಿನ ಮೇಲೆ ಹೊದಿಸಿಕೊಂಡು ವಿಜಯ ವೇದಿಕೆ ಏರಬೇಕು’ ಎಂದು ತಿಳಿಸಿದರು.
ಪ್ರಾಂಶುಪಾಲೆ ಶಬೀನಾ. ಹೆಚ್ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ‘ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟೋಟಗಳಲ್ಲಿಯೂ ಭಾಗವಹಿಸುವುದು ಬಹಳ ಮುಖ್ಯ’ ಹಾಗೂ ಪ್ರಸ್ತುತ ದಿನಗಳಲ್ಲಿನ ಕ್ರೀಡೆಯ ಮಹತ್ವದ ಕುರಿತು ತಿಳಿಸಿದರು.
ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಸೌರಭ ಹಾಗೂ ವಿದ್ಯಾರ್ಥಿ ಕ್ರೀಡಾ ಮುಖಂಡ ಮನಾಜ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ರಿದಾ ನಿರೂಪಿಸಿದರು. ಅನಿಷಾ ಸ್ವಾಗತಿಸಿದರು. ಮುಝಮ್ಮಿಲ್ ಗಣ್ಯರನ್ನು ಪರಿಚಯಿಸಿದರು. ಬುಶ್ರಾ ವಂದಿಸಿದರು.