ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ
: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದ್ದಾರೆ.

Call us

Click Here

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ಪತ್ರಿಕೋದ್ಯಮ ಪ್ರಭಾವಿ ಮಾಧ್ಯಮವಾಗಿದ್ದು, ಜನರು ಪತ್ರಿಕೆ ಓದುವ ಹಾವ್ಯಸ ಬೆಳೆಸಿಕೊಳ್ಳಬೇಕು. ಪತ್ರಕರ್ತರು ದಿನದ 30 ನಿಮಿಷಗಳನ್ನು ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಡಬೇಕು. ಇದರಿಂದ ಆರೋಗ್ಯವಂತರಾಗಿ ರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಧ್ವಜಾರೋಹಣ ನೆರವೇರಿಸಿದರು. ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್ ನೇತೃತ್ವದಲ್ಲಿ ವಿವಿಧ ತಾಲೂಕು ಸಂಘಗಳ ಸದಸ್ಯರಿಂದ ಪಥ ಸಂಚಲನ ನಡೆಯಿತು. ರಜತ ಮಹೋತ್ಸವ ಸಮಿತಿಯ ಕ್ರೀಡಾ ಸಂಚಾಲಕ ರಾಜು ಖಾರ್ವಿ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸಲಾಯಿತು. ಕ್ರೀಡಾಜ್ಯೋತಿಯನ್ನು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ, ಉದ್ಯಮಿ ಆನಂದ ಪಿ. ಸುವರ್ಣ ಮಲ್ಪೆ, ಮಣಿಪಾಲ ಮಾಹೆಯ ಕ್ರೀಡಾ ಕಾರ್ಯದರ್ಶಿ ವಿನೋದ್ ನಾಯಕ್ ಭಾಗವಹಿಸಿದ್ದರು. ಕ್ರೀಡಾಕೂಟಕ್ಕೆ ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಚಾಲನೆ ನೀಡಿದರು.

Click here

Click here

Click here

Click Here

Call us

Call us

ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಶರೀಫ್ ಕಾರ್ಕಳ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ಕೆ.ಸಿ. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಓಟ, ರಿಲೇ, ಹಗ್ಗಜಗ್ಗಾಟ, ಮಡಕೆ ಒಡೆಯುವ ಸೇರಿದಂತೆ ವಿವಿಧ ಮನರಂಜನಾ ಸ್ಪರ್ಧೆಗಳು ನಡೆದವು.

Leave a Reply