ಉಡುಪಿ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ತೆರೆಯಲು ಯೋಜನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ರಾಜ್ಯದಲ್ಲಿ ಈಗಾಗಲೇ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ (PPP) ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

Call us

Click Here

ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ.

ಉಡುಪಿ ಜಿಲ್ಲೆಗೆ ಪಿಪಿಪಿ ಬದಲಾಗಿ ಪೂರ್ಣ ಪ್ರಮಾಣದ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ.

Leave a Reply