ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರದ ಹಂಗಳೂರು ಬ್ರಹ್ಮ ದೇವಸ್ಥಾನ ರಸ್ತೆಯ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಸಹಿತ ಪರಾರಿಯಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಇಲ್ಲಿನ ನಿವಾಸಿ ಜಗದೀಶ್ ಚಂದ್ರ ನಾಯರ್ ಎಂಬುವವರ ಮನೆಯಲ್ಲಿ ಕಳವು ನಡೆದಿದೆ.

ಜಗದೀಶ್ ರಾವ್ ಅವರು ಕೆಲಸ ಮುಗಿಸಿಕೊಂಡು ಮಧ್ಯಾಹ್ನ ಊಟ ಮಾಡಿ ತಮ್ಮ ಕೆಲಸಕ್ಕೆ ತೆರಳಿದ್ದರು. ಸುಮಾರು 4 ಗಂಟೆಗೆ ಜಗದೀಶ್ ಪತ್ನಿ ಮಗಳನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಹಗಲಲ್ಲಿಯೇ ಕಳ್ಳತನ ನಡೆದ ಬಗ್ಗೆ ಸುತ್ತಲಿನ ಜನರು ಆತಂಕಕ್ಕೊಳಗಾಗಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಕೆ ಕೈಗೆತ್ತಿಕೊಂಡಿದ್ದಾರೆ.