ನ.1 ರಿಂದ 7: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಇವರ ವತಿಯಿಂದ ನವೆಂಬರ್ 1 ರಿಂದ 7ರ ವರೆಗೆ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು .

Call us

Click Here

ಕುಂದಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯೋತ್ಸವಕ್ಕೆ 68 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ನಡೆಸಲು ಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಗಣ್ಯಾಥಿ ಗಣ್ಯರು ಉಪಸ್ಥಿತರಿರುವರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆ ಅನಾವರಣಗೊಳ್ಳಲಿದೆ. ಕಾರ್ಯಕ್ರಮವನ್ನು ತೀರಾ ಅಪರೂಪ ಮತ್ತು ವಿಶಿಷ್ಠ ಶೈಲಿಯಲ್ಲಿ ಆಯೋಜಿಸಲಾಗಿದೆ. ಅಕ್ಟೋಬರ್‌ 31ರಂದು ಕನ್ನಡ ತೇರು ಮೆರವಣಿಗೆ, ನ.1ರಿಂದ ಪ್ರತಿದಿನ ಸಂಜೆ 7 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಹಿರಿಯ ವಿದ್ಯುತ್ ಗುತ್ತಿಗೆದಾರ ಕೆ .ಆರ್. ನಾಯ್ಕ್ ಹಾಗೂ ಸಂಸ್ಥೆಯ ಕಾರ್ಯದರ್ಶಿ ತ್ರಿವಿಕ್ರಮ್ ಪೈ ಉಪಸ್ಥಿತರಿದ್ದರು .

Leave a Reply