ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಯುವ ನಾಯಕ ಶಬ್ಬೀರ್ ಬೈಂದೂರು ನೇಮಕ ಮಾಡಲಾಗಿದೆ.
ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಶಿಪಾರಸ್ಸಿನ ಮೇರೆಗೆ, ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಸೂಚನೆಯಂತೆ ಉಡುಪಿ ಜಿಲ್ಲಾಧ್ಯಕ್ಷ ಶರ್ಪುದ್ದೀನ್ ಶೇಕ್ ಅವರು ನೇಮಕ ಮಾಡಿದ್ದಾರೆ.