ಗಂಗೊಳ್ಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಬಹಳಷ್ಟು ಕಾಯಿಲೆಗಳು ಮನುಷ್ಯನನ್ನು ಕಾಡುತ್ತಿದೆ. ಪಾಶ್ಚಿಮಾತ್ಯರ ಅನುಕರಣೆಯಿಂದಾಗಿ ನಮ್ಮ ಜೀವನ ಶೈಲಿಯನ್ನು ಹಾಗೂ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಿದ್ದೇವೆ. ಇಂದಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದ್ದು, ಕಾಯಿಲೆ ರಹಿತವಾಗಿ ಆರೋಗ್ಯವಂತರಾಗಿ ಬದುಕಲು ಕಾಲ ಕಾಲಕ್ಕೆ ಆರೋಗ್ಯ ತಪಾಣೆ ಮಾಡಿಸಿಕೊಳ್ಳುತ್ತಿರಬೇಕು. ದೇಹದ ರೋಗ ನಿರೋಧಕರ ಶಕ್ತಿಯನ್ನು ವೃದ್ಧಿಸಿಕೊಳ್ಳಲು ನಮ್ಮ ಸುತ್ತಮುತ್ತಲು ದೊರೆಯುವ ಔಷಧಿ ಸಸ್ಯಗಳನ್ನು ಆಹಾರ ರೂಪದಲ್ಲಿ ಹಾಗೂ ಸಣ್ಣಪುಟ್ಟ ಕಾಯಿಲೆಗಳಿಗೆ ಮನೆ ಮದ್ದಾಗಿ ಉಪಯೋಗಿಸಬಹುದು ಎಂದು ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉದ್ಯಾವರ ಇದರ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಹೇಳಿದರು.

Call us

Click Here

ನಾಯಕವಾಡಿ-ಗುಜ್ಜಾಡಿ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತ್ರಾಸಿ ವಲಯ ಬೈಂದೂರು ತಾಲೂಕು ಮತ್ತು ಶ್ರೀ ರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರ ನಾಯಕವಾಡಿ ಇವರ ಸಹಯೋಗದೊಂದಿಗೆ ನಾಯಕವಾಡಿಯ ಶ್ರೀ ರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಂಗಣದಲ್ಲಿ ಭಾನುವಾರ ಜರಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಆರೋಗ್ಯ ಮಾಹಿತಿ ನೀಡಿ ಅವರು ಮಾತನಾಡಿದರು.

ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಅಧ್ಯಕ್ಷ ಶ್ರೀಧರ ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಪ್ರದೀಪ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತ್ರಾಸಿ ವಲಯ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ, ಬೆಣ್ಗೆರೆ ಶ್ರೀ ಸುಬ್ರಹ್ಮಣ್ಯೇಶ್ವರ ಯುತ್ ಕ್ಲಬ್ ಅಧ್ಯಕ್ಷ ವಿಶ್ವನಾಥ ಮೇಸ್ತ, ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಅಧ್ಯಕ್ಷ ರಘುರಾಮ, ಆಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಾ ತಜ್ಞ ಟಿ., ಡಾ.ರಜನೀಶ್ ವಿ.ಗಿರಿ ಉಪಸ್ಥಿತರಿದ್ದರು.

ಯುವಕ ಮಂಡಲದ ಜತೆ ಕಾರ್ಯದರ್ಶಿ ಗಣೇಶ ಕುಮಾರ್ ಸ್ವಾಗತಿಸಿದರು. ರಾಜು ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ನಿತೇಶ್ ಕುಮಾರ್ ವಂದಿಸಿದರು.

Leave a Reply