Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೆಲ್‌ನೆಸ್ ರೂಮ್‌ನ ಉದ್ಘಾಟನೆ ಮತ್ತು ಮಾನಸಿಕ ಸ್ವಾಸ್ಥ್ಯ ಕುರಿತ ಅಧಿವೇಶನ ಕಾರ್ಯಕ್ರಮ
    alvas nudisiri

    ವೆಲ್‌ನೆಸ್ ರೂಮ್‌ನ ಉದ್ಘಾಟನೆ ಮತ್ತು ಮಾನಸಿಕ ಸ್ವಾಸ್ಥ್ಯ ಕುರಿತ ಅಧಿವೇಶನ ಕಾರ್ಯಕ್ರಮ

    Updated:29/10/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಅನಾರೋಗ್ಯ ಮತ್ತು ಕ್ಷೇಮ ಎಂಬುದು ಎರಡು ಭಿನ್ನ ವಿಚಾರಗಳು. ಕ್ಷೇಮ ತರಬೇತಿ ಕೇಂದ್ರವು ವಿದ್ಯಾರ್ಥಿಗಳ  ಶೈಕ್ಷಣಿಕ ಕಾರ್ಯಕ್ಷಮತೆ, ವೈಯಕ್ತಿಕ ಸಂಬಂಧಗಳು ಮತ್ತು ಒಟ್ಟಾರೆ ಯೋಗಕ್ಷೇಮವನ್ನು ವಿಚಾರಿಸಿ, ಸಮಾಲೋಚಿಸುವ ಕಾರ್ಯವನ್ನು ಮಾಡುತ್ತವೆ. ಇದೊಂದು ಮಾನಸಿಕ ಆರೋಗ್ಯವನ್ನು ಉನ್ನತೀಕರಣದ ಪರಿಕಲ್ಪನೆಯಾಗಿದೆ ಎಂದು ಉಡುಪಿಯ ಎವಿ ಬಾಳಿಗಾ ಸಂಸ್ಥೆಯ  ಮನೋವೈದ್ಯ ಡಾ. ಪಿ.ವಿ. ಭಂಡಾರಿ  ಹೇಳಿದರು .

    Click Here

    Call us

    Click Here

    ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಳ್ವಾಸ್ ಸೆಂಟರ್ ಫಾರ್ ವೆಲ್ ನೆಸ್ ಟ್ರೈನಿಂಗ್ ಆಶ್ರಯದಲ್ಲಿ ಪದವಿ ಎವಿ ಕೊಠಡಿಯಲ್ಲಿ ಸೋಮವಾರ ನಡೆದ “ವೆಲ್‌ನೆಸ್ ರೂಮ್‌ನ ಉದ್ಘಾಟನೆ, ಬಡ್ಡಿಸ್ ಮೂಮೆಂಟ್ ಚಾಲನೆ ಮತ್ತು ಮಾನಸಿಕ ಸ್ವಾಸ್ಥ್ಯ ಕುರಿತ ಅಧಿವೇಶನ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು .

    ಆತಂಕದ ಅಸ್ವಸ್ಥತೆಗಳು, ಖಿನ್ನತೆ, ನಿದ್ರಾ ಭಂಗಗಳು, ಮಾದಕ ವ್ಯಸನ, ಒತ್ತಡ ಸಂಬಂಧಿತ ಸಮಸ್ಯೆಗಳು ಹಾಗೂ ತಿನ್ನುವ ಕ್ರಮದಲ್ಲಿನ  ಅಸ್ವಸ್ಥತೆ  ಸಾಮಾನ್ಯ ಮಾನಸಿಕ ಆರೋಗ್ಯದ ಮುಖ್ಯ  ಸವಾಲುಗಳಾಗಿವೆ ಎಂದರು.

    ಸಮಯ ನಿರ್ವಹಣೆ, ಒತ್ತಡ ನಿರ್ವಹಣೆ, ಸಾಮಾಜಿಕ ಸಂಪರ್ಕಗಳು, ಅಗತ್ಯವಿದ್ದಾಗ ಸಹಾಯವನ್ನು ಹುಡುಕುವುದೆಲ್ಲ ಮಾನಸಿಕ ಸ್ವಾಸ್ಥ್ಯವನ್ನು ಉತ್ತೇಜಿಸುವ ತಂತ್ರಗಳಾಗಿವೆ ಎಂದು ಹೇಳಿದರು .

    ನಿಮ್ಮ ಪ್ರೀತಿಪಾತ್ರರೊಂದಿಗೆ ನಿಮ್ಮ ಸಮಸ್ಯೆಗಳನ್ನು ಚರ್ಚಿಸುವುದರೊಂದಿಗೆ  ಬಹುತೇಕ ಸಮಸ್ಯೆಗಳಿಗೆ ಮೂಲ ಪರಿಹಾರ ಸಿಗುತ್ತವೆ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ, ವಿಶ್ರಾಂತಿ ತಂತ್ರಗಳ ಪಾಲನೆ ಮಾಡುವುದರಿಂದ  ಉತ್ತಮವಾದ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು. 

    Click here

    Click here

    Click here

    Click Here

    Call us

    Call us

    ಉತ್ತಮವಾದ ಆರೋಗ್ಯ ಪಡೆಯಬೇಕಾದರೆ , ಹೆಚ್ಚೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು . ಪುಸ್ತಕಗಳು ಒಳ್ಳೆಯ ವಿರಾಮದಾಯಕವನ್ನು ಒದಗಿಸುತ್ತದೆ. ವಿದ್ಯಾರ್ಥಿಗಳೊಂದಿಗೆ ಬೆರೆಯುವುದು ,ಕ್ಯಾಂಪಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು, ಕುಟುಂಬ ಮತ್ತು ಸ್ನೇಹಿತರೊಂದಿಗೆ ಒಳ್ಳೆಯ ರೀತಿಯಲ್ಲಿ ಪ್ರತಿಕ್ರಿಯೆ ನೀಡುವುದು  ಸಾಮಾಜಿಕ ಸಂಪರ್ಕವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.

    ಮಾನಸಿಕ ಅಸ್ವಸ್ಥತೆಯು ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುವುದರಿಂದ , ಮಾನಸಿಕ ಆರೋಗ್ಯದ  ಕಡೆಗೆ ಹೆಚ್ಚು ಆದ್ಯತೆ ನೀಡಿ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ , ಪ್ರಸ್ತುತ ಕಾಲಮಾನದಲ್ಲಿ ಮನುಷ್ಯ ಹೆಚ್ಚೆಚ್ಚು ಸ್ವಾರ್ಥಿಗಳಾಗಿ ವರ್ತಿಸುವವನಾಗುತ್ತಿದ್ದಾನೆ. ತನ್ನ ಸಮಸ್ಯೆಯೇ ಅತ್ಯಂತ ಸೂಕ್ಶ್ಮವಾದದ್ದು, ಬೇರೆಯವರ ಸಮಸ್ಯೆಗಳಿಗೆ ಸ್ಪಂದಿಸಲು ಸಮಯವೇ ಇಲ್ಲ ಎಂದು ಭಾವಿಸುವ ಮನೋಭಾವ ಬೆಳೆಸಿಕೊಂಡಿದ್ದಾನೆ. ಅತಿಯಾದ ಯೋಚನೆ ಮಾನಸಿಕ ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ  ಕುಟುಂಬದ ಜೊತೆಗೆ ಹೆಚ್ಚಿನ ಸಮಯವನ್ನು ಕಳೆಯಬೇಕು. ಇಂತಹ ತರಬೇತಿ ಕೇಂದ್ರವು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಹೆಚ್ಚು ಪೂರಕವಾಗುತ್ತದೆ ಎಂದು ಹೇಳಿದರು. 

    ನೂತನವಾಗಿ ಉದ್ಘಾಟನೆಗೊಂಡ ಆಳ್ವಾಸ್ ವೆಲ್‌ನೆಸ್ ತರಬೇತಿ ಕೇಂದ್ರದಲ್ಲಿ ಓದಿನ ಮೂಲಕ ಚಿಕಿತ್ಸೆ, ಮಂಡಲ ಕಲಾ ಚಿಕಿತ್ಸೆ ಮತ್ತು ಸಂಗೀತ ಕಲಾ ಚಿಕಿತ್ಸಾ  ಕ್ರಮವಿಧಾನಗಳಿವೆ . ಈ ಕೇಂದ್ರವು ಮಾನಸಿಕ ಯೋಗಕ್ಷೇಮವನ್ನು ಉತ್ತೇಜಿಸಲು ಮತ್ತು ವಿದ್ಯಾರ್ಥಿಗಳು ಹಾಗೂ  ಸಿಬ್ಬಂದಿಗೆ ಉತ್ತಮ ಸಮುದಾಯವನ್ನು ಬೆಳೆಸುವ ಗುರಿಯನ್ನು ಹೊಂದಿದೆ ಎಂದರು.

    ಆಳ್ವಾಸ್ ವೆಲ್‌ನೆಸ್ ತರಬೇತಿ ಕೇಂದ್ರದ ನಿರ್ದೇಶಕಿ ಡಾ. ದೀಪಾ ಕೊಠಾರಿ, ಆಳ್ವಾಸ್ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಡಾ. ಮೂಕಾಂಬಿಕಾ ಜಿ. ಎಸ್, ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಆಡ್ರಿ ಪಿಂಟೋ , ಕಾಲೇಜಿನ ಕುಲಸಚಿವ (ಮೌಲ್ಯ ಮಾಪನ)  ನಾರಾಯಣ ಶೆಟ್ಟಿ ವಿವಿಧ ವಿಭಾಗದ ವಿದ್ಯಾರ್ಥಿ ಪ್ರತಿನಿಧಿಗಳು ಭಾಗಿಯಾಗಿದ್ದರು.

    ಸಮಾಜಕಾರ್ಯ ವಿಭಾಗದ  ಸಹ ಪ್ರಾಧ್ಯಾಪಕಿ ಡಾ. ಸ್ವಪ್ನಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    11 − 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.