ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನೇರಳಕಟ್ಟೆ – ತಲ್ಲೂರು ರಸ್ತೆಯ ತಲ್ಲೂರು ಗ್ರಾಮದ ಸಹದೇವಿ ಹಾಲ್ ಬಳಿ ಸ್ಕೂಟಿಗೆ ಬೈಕ್ ಢಿಕ್ಕಿಯಾಗಿ, ಸ್ಕೂಟಿ ಸವಾರ ರಾಮಚಂದ್ರ (67) ಗಂಭೀರ ಗಾಯಗೊಂಡಿದ್ದು, ಬೈಕ್ ಸವಾರ ಶಶಾಂಕ್ ಸಹ ಗಾಯಗೊಂಡ ಘಟನೆ ನಡೆದಿದೆ.
ಶಶಾಂಕ ಎಂಬುವವನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ರಾಮಚಂದ್ರ ಅವರ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರಿಗೆ ತಲೆ, ಮುಖ, ಕಾಲಿಗೆ ತೀವ್ರತರದ ಗಾಯಗೊಂಡು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಶಶಾಂಕ್‌ರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










