ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿಬಿದ್ದು ಚಾಲಕ ಮೃತಪಟ್ಟ ಘಟನೆ ಒತ್ತಿನಣೆ ರಾ.ಹೆ-66ರಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಲಾರಿ ಚಾಲಕ ದಾಮೋದರ್ ಯಾದವ್ ಮೃತ ದುರ್ದೈವಿ.



ಲೋಕಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಗಣಪತಿ ಲಾಜಿಸ್ಟಿಕ್ಸ್ ಸಂಸ್ಥೆಗೆ ಸೇರಿದ ಲಾರಿ ಒತ್ತಿನಣೆ ಹೇನಬೇರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಮೃತಪಟ್ಟಿದ್ದಾರೆ. ಲಾರಿಯಲ್ಲಿ ಲೋಡ್ ಆಗಿದ್ದ ಜೆಕೆ ಸಿಮೆಂಟ್ ಚೀಲಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಘಟನೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಬೈಂದೂರು ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಅಗ್ನಿಶಾಮಕದಳದ ಸಿಬ್ಬಂದಿಗಳು ಲಾರಿ ಮೇಲಕ್ಕೆತ್ತುವಲ್ಲಿ ಶ್ರಮಿಸಿದರು. ಕ್ರೇನ್ ಮೂಲಕ ಮಗುಚಿದ ಲಾರಿಯನ್ನು ಮೇಲಕ್ಕೆತ್ತಲಾಯಿತು.










