ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಹ ಭಾರತೀಯ ನಾಗರಿಕರಿಗೆ ಅವಕಾಶ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

Call us

Click Here

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ವೆಬ್‌ಸೈಟ್ www.ceokarnataka.kar.nic.in ಮತ್ತು ಜಿಲ್ಲಾಧಿಕಾರಿಯವರ ಕಚೇರಿಯ ವೆಬ್‌ಸೈಟ್ www.udupi.nic.in ನಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದಲ್ಲಿ ನೇಮಕ ಮಾಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆ ಹಾಗೂ ಕ್ಲೇಮ್‌ಗಳನ್ನು ನವೆಂಬರ್ 28 ರ ಒಳಗೆ ಸಲ್ಲಿಸಬಹುದಾಗಿದ್ದು, ಇವುಗಳನ್ನು ಡಿಸೆಂಬರ್ 24 ರಂದು ವಿಲೇವಾರಿ ಮಾಡಲಾಗುವುದು. 2025 ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಮತದಾರರ ಪಟ್ಟಿಗೆ 2025 ರ ಜನವರಿ 01, ಏಪ್ರಿಲ್ 01, ಜುಲೈ 01, ಅಕ್ಟೋಬರ್ 01 ಕ್ಕೆ 18 ವರ್ಷ ಪೂರ್ಣಗೊಳಿಸಿರುವ ಅರ್ಹ ಭಾರತೀಯ ನಾಗರಿಕರು ವಯಸ್ಸಿನ ಹಾಗೂ ವಾಸ್ತವ್ಯದ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದ ಅವರು, ವಿಶೇಷ ಮತದಾರರ ನೋಂದಣಿ ಶಿಬಿರಗಳನ್ನು 2024 ರ ನವೆಂಬರ್ 9, 10, 23 ಹಾಗೂ 24 ರಂದು ಪ್ರತಿಯೊಂದು ಮತಗಟ್ಟೆಗಳಲ್ಲಿ ನಡೆಯಲಿದೆ ಎಂದರು.

ಹೊಸ ಮತದಾರರ ಪಟ್ಟಿ ನೋಂದಣಿಗೆ ನಮೂನೆ -6 ರಲ್ಲಿ, ಅನಿವಾಸಿ ಭಾರತೀಯರು 6-ಎ ನಲ್ಲಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು ಅರ್ಜಿ ನಮೂನೆ-7, ಒಂದು ವಿಧಾನಸಬಾ ಕ್ಷೇತ್ರದಿಂದ ವಾಸಸ್ಥಳ ಬದಲಾಯಿಸಲು ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

Click here

Click here

Click here

Click Here

Call us

Call us

ಅರ್ಜಿದಾರರು ಆನ್‌ಲೈನ್ ಮೂಲಕ ವೆಬ್‌ಪೋರ್ಟಲ್ www.nvsp.in ಹಾಗೂ ವೋಟರ್ ಹೆಲ್ಪ್ಲೈನ್ ಆಪ್ ನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಹಾಗೂ ತಿದ್ದುಪಡಿಗಳಿಗಾಗಿ ಅವಕಾಶವಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ತೆರೆಯಲಾದ ಜಿಲ್ಲಾ ಮತದಾರರ ಸಹಾಯವಾಣಿ ಉಚಿತ ದೂರವಾಣಿ ಸಂಖ್ಯೆ: 1950 ಅನ್ನು ಸಂಪರ್ಕಿಸಬಹುದಾಗಿದೆ ಎಂದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಏನಾದರೂ ಬದಲಾವಣೆಗಳಿದ್ದಲ್ಲಿ ಮತದಾರರು ಸಮೀಪದ ತಾಲೂಕು ಕಚೇರಿಗಳಿಗೆ ಅಥವಾ ವಾಸವಿರುವ ವಿಳಾಸ ವ್ಯಾಪ್ತಿಗೆ ಬರುವ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಬಿ.ಜೆ.ಪಿ. ಯ ಚಂದ್ರಶೇಖರ ಪ್ರಭು, ಸಿ.ಪಿ.ಐ ನ ಮೋಹನ್ ಜಿ.ಎಂ, ಕಾಂಗ್ರೇಸ್‌ನ ಶ್ರೀನಿವಾಸ ಹೆಬ್ಬಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply