ಬದುಕಿನ ಆಯಾಮದಲ್ಲಿ ಪುನೀತ್‌ ರಾಜ್‌ಕುಮಾರ್‌ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಿ: ಸೀತಾರಾಮ ಆಚಾರ್

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ
: ಬದುಕಿನ ಆಯಾಮದಲ್ಲಿ ಪುನೀತ್‌ ರಾಜ್‌ಕುಮಾರ್‌ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಆ ಮೂಲಕ ಜೀವನದಲ್ಲಿ ಸಾರ್ಥಕ ಕಾಣಲು ಸಾಧ್ಯ ಎಂದು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮಾಜಿ ಅಧ್ಯಕ್ಷ ಸೀತಾರಾಮ ಆಚಾರ್ ಹೇಳಿದರು.

Call us

Click Here

ಕೋಟದ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಸಾಮಾಜಿಕ ಹರಿಕಾರ ಚಿತ್ರನಟ ಪುನೀತ್‌ ರಾಜ್‌ಕುಮಾರ್‌ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದಲ್ಲಿ ತೆರೆಯ ಮರೆಯಲ್ಲಿ ಸೇವೆಗೈದು ನಮ್ಮೆಲ್ಲರಿಗೂ ಮಾದರಿ ಬದುಕಿನ ಸಂದೇಶ ನೀಡಿದ ರಾಜ್‌ಕುಮಾರ್‌ ಜೀವನ ಚರಿತ್ರೆ ಇತಿಹಾಸ ಪುಟದಲ್ಲಿ ಸೇರಿಕೊಂಡಿದೆ ಅಂತಹ ವ್ಯಕ್ತಿಯ ಹೆಸರಿನಲ್ಲಿ  ವಿದ್ಯಾನಿಧಿ ಯೋಜನೆ ರೂಪಿಸಿದ ಪಂಚವರ್ಣ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ, ಅವರ ಅಭಿಮಾನ ಹೊಂದಿದ ಸಂಸ್ಥೆಯ ಸದಸ್ಯ ದಿನೇಶ್ ಆಚಾರ್ ರವರ ಅಭಿಮಾನ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್ ಪುನೀತ್‌ ರಾಜ್‌ಕುಮಾರ್‌ ಭಾವ ಚಿತ್ರಕ್ಕೆ ಪುಷ್ಭಾರ್ಚನೆಗೈದು ಪುನೀತ್‌ ಜೀವನದ ತಳಹದಿಯನ್ನು ಸಭೆಯಲ್ಲಿ ಬಿಚ್ಚಿಟ್ಟರು.

ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಈ ವೇಳೆ ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಪುನೀತ್‌ ರಾಜ್‌ಕುಮಾರ್‌ಅಭಿಮಾನಿ ಬಳಗದ ಮುಖ್ಯಸ್ಥ ದಿನೇಶ್ ಆಚಾರ್ ಮಣೂರು ಮತ್ತಿತರರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು.

ಕಾರ್ಯಕ್ರಮವನ್ನು ಸದಸ್ಯರಾದ ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.

Leave a Reply