ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತಗೊಳಿಸಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ನಡೆಯುತ್ತಿರುವ ನೂತನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು, ಮೇಲ್ಸೇತುವೆ ಕಾಮಗಾರಿ, ಅಂಡರ್‌ಪಾಸ್ ಹಾಗೂ ಹೆದ್ದಾರಿ ನಿರ್ವಹಣೆ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಕೈಗೊಳ್ಳುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಅವಶ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಭೂ ಮಾಲೀಕರಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಹಣವನ್ನು ವಿಳಂಬವಿಲ್ಲದೇ ಒದಗಿಸಿ, ಹೆದ್ದಾರಿ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಬೇಕು. ನ್ಯಾಯಾಲಯದ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥವಾಗುವ ರೀತಿಯಲ್ಲಿ ಕ್ರಮವಹಿಸಬೇಕು ಎಂದರು.

ರಾ.ಹೆ 66 ರ ಸಂತೆಕಟ್ಟೆ ರಸ್ತೆ ಕಾಮಗಾರಿಯ ಉಡುಪಿ ಯಿಂದ ಕುಂದಾಪುರ ಕಡೆ ಹೋಗುವ ರಸ್ತೆಯ ಬದಿಯ ಸೈಡ್‌ವಾಲ್ ಅನ್ನು ನವೆಂಬರ್ ಒಳಗಾಗಿ ಪೂರ್ಣಗೊಳಿಸಬೇಕು. ಅದರ ಪಕ್ಕದಲ್ಲಿರುವ ಸರ್ವೀಸ್ ರಸ್ತೆ ಕಾಮಗಾರಿಗಳನ್ನು ಸಹ ನಿರ್ಮಾಣ ಮಾಡಲು ಕೂಡಲೇ ಯೋಜನಾ ವರದಿಯನ್ನು ತಯಾರಿಸಿ, ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು. 

ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ಮಲ್ಪೆಯಿಂದ ಹೆಬ್ರಿ ವರೆಗಿನ ಪರ್ಕಳ ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ನ್ಯಾಯಾಲಯದ ಆದೇಶವು ಸರ್ಕಾರದ ಪರವಾಗಿ ಆಗಿದ್ದು, ಭೂ ಮಾಲೀಕರಿಗೆ ಕೂಡಲೇ ಭೂ ಸ್ವಾಧೀನದ ಪರಿಹಾರದ ಹಣವನ್ನು ನೀಡಬೇಕು. ಕಾಮಗಾರಿಯನ್ನು ಸಹ ಪ್ರಾರಂಭಿಸಬೇಕು. ಪೆರ್ಡೂರಿನ ಅಂನಂತೇಶ್ವರ ದೇವಸ್ಥಾನ ವ್ಯಾಪ್ತಿಯ 600 ಮೀ. ವ್ಯಾಪ್ತಿಯಲ್ಲಿ ಕಾಮಗಾರಿ ಸಂಬಂಧ ನ್ಯಾಯಾಲಯವು ತಡೆ ಆಜ್ಞೆ ನೀಡಿದೆ. ಇದನ್ನು ಬಿಟ್ಟು ಬಾಕಿ ಉಳಿದ ಕಾಮಗಾರಿಯನ್ನು ಕೈಗೊಳ್ಳಬೇಕು. ದೇವಸ್ಥಾನ ಹಾಗೂ ಕಲ್ಯಾಣಿಯ ಮೂಲ ಸ್ವರೂಪಕ್ಕೆ ಧಕ್ಕೆ ಆಗಬಾರದೆಂಬುದು ಭಕ್ತರ ಬೇಡಿಕೆಯಿದೆ. ಇದನ್ನು ಮನಗಂಡು ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದರು.

Click here

Click here

Click here

Click Here

Call us

Call us

ಕರಾವಳಿ ಜಂಕ್ಷನ್‌ನಿಂದ ಮಲ್ಪೆ ಜಂಕ್ಷನ್ ವರೆಗಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದರೊಂದಿಗೆ ಭೂ ಮಾಲೀಕರಿಗೆ ಪರಿಹಾರದ ಹಣವನ್ನು ನವೆಂಬರ್ 10 ರ ಒಳಗೆ ನೀಡುವುದರ ಜೊತೆಗೆ ಕಾಮಗಾರಿಯ ವೇಗವನ್ನು ಹೆಚ್ಚಿಸಬೇಕು ಎಂದರು.

ರಾ.ಹೆ 66 ರ ಹೆಜಮಾಡಿ ಹಾಗೂ ಸಾಸ್ತಾನದ ಟೋಲ್ ಗೇಟ್ ಬಳಿ ರಾತ್ರಿ ವೇಳೆಯಲ್ಲಿ ವಾಹನ ಚಾಲಕರಿಗೆ ಅನುಕೂಲವಾಗುವಂತೆ ಕ್ಯಾಂಟೀನ್ ಪ್ರಾರಂಭಿಸುವ ಕುರಿತು ಕೂಡಲೇ ಟೆಂಡರ್ ಕರೆಯಬೇಕು. ಟೋಲ್‌ನ ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ಜನರ ವಾಹನಗಳಿಗೆ ರಿಯಾಯಿತಿ ನೀಡಬೇಕು ಎಂದರು.

ಕಟಪಾಡಿ ಮತ್ತು ಅಂಬಲಪಾಡಿಯಲ್ಲಿ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕಾರ್ಯಗಳನ್ನು ಕೈಗೊಳ್ಳುವುದರೊಂದಿಗೆ ಕಾಮಗಾರಿ ಪ್ರಾರಂಭಿಸಬೇಕು ಎಂದ ಅವರು, ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ವೇಗವನ್ನು ಮತ್ತಷ್ಟು ಹೆಚ್ಚಿಸಬೇಕು. ರೈಲ್ವೇ ಇಲಾಖೆ, ರಾಷ್ಟ್ರೀಯ ಹೆದ್ದಾರಿ ವಿಭಾಗದವರು ಹಾಗೂ ಗುತ್ತಿಗೆದಾರರುಗಳು ಸಮನ್ವಯದೊಂದಿಗೆ ಪರಿಶೀಲನೆ, ಅನುಮತಿ, ರೈಲ್ವೇ ಹಳಿಗಳ ಮೇಲೆ ಗರ್ಡರ್ ಕೂರಿಸುವಿಕೆಗೆ ಎಲ್ಲಾ ರೀತಿಯ ಪೂರ್ವ ತಯಾರಿಗಳನ್ನು ಕೈಗೊಂಡು, ನವೆಂಬರ್ ತಿಂಗಳ ಅಂತ್ಯದ ಒಳಗಾಗಿ ಮುಗಿಸಲು ಮುಂದಾಗಬೇಕು ಎಂದರು.

ಸವಣೂರು-ಬಿರ್ಕನಕಟ್ಟೆ ರಸ್ತೆ ಕಾಮಗಾರಿಯು ಮಳೆಯಿಂದಾಗಿ ನಿಧಾನವಾಗಿದ್ದು, ಮಳೆಯ ಪ್ರಮಾಣ ಇಲ್ಲದೇ ಇರುವುದರಿಂದ ಕಾಮಗಾರಿ ಪ್ರಗತಿಯನ್ನು ತ್ವರಿತಗೊಳಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ವೀಸ್ ರಸ್ತೆ, ತಾತ್ಕಾಲಿಕ ಬಸ್ ನಿಲ್ದಾಣ ಸೇರಿದಂತೆ ಅಗತ್ಯವಿರುವ ಪೂರಕ  ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಬೀದಿ ದೀಪಗಳ ನಿರ್ವಹಣೆ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಸಾಸ್ತಾನದಿಂದ ಕುಂದಾಪುರದವರೆಗಿನ ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಆಗಿಂದಾಗ್ಗೆ ಮಾಡಬೇಕು ಎಂದರು.

ಸಭೆಯಲ್ಲಿ ಶಾಸಕರುಗಳಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಡಿಎಫ್‌ಓ ಗಣಪತಿ, ಸಹಾಯಕ ಕಮೀಷನರ್ ಮಹೇಶ್ಚಂದ್ರ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply