ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಂಗಳೂರು ಕಂಕನಾಡಿ ರೋಷನಿ ನಿಲಯ ಕಾಲೇಜು ಆಯೋಜಿಸಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ವಿದ್ಯಾರ್ಥಿಗಳಾದ ಲಕ್ಷ್ಮಿಕಾಂತ, ನೀಲೇಶ್ ಮತ್ತು ಸುಶನ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ಸೌತ್ ವೆಸ್ಟ್ ಜೋನ್ ಮಧ್ಯಪ್ರದೇಶದಲ್ಲಿ ನಡೆಯುವ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಟೀಮ್ ಚಾಂಪಿಯನ್ ಶಿಪ್‍ನಲ್ಲಿ ಲಕ್ಷ್ಮಿಕಾಂತ, ನೀಲೇಶ, ಆಯುಷ್ ಪುತ್ರನ್, ಸುಶನ್, ಮಹಮ್ಮದ್ ಶಮ್ಮಜ್, ಆಯುಷ್ ನಾಯಕ್ ಭಾಗವಹಿಸಿ, ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಬೈಂದೂರು ಕಾಲೇಜಿನ ಇತಿಹಾಸದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ ಸಾಧನೆಯಾಗಿದೆ.
ಈ ಸಾಧನೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ಬೈಂದೂರಿನ ಗೌರವವನ್ನು ಹೆಚ್ಚಿಸಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಕಾಲೇಜು ಅಭಿವೃಧ್ಧಿ ಸಮಿತಿ, ಕ್ರೀಡಾ ತರಬೇತುದಾರರಾದ ಪ್ರಭಾಕರ ಗೌಡ, ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.