ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧನ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ.

Call us

Click Here

ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು. ಭಂಡಾರಿ (19) ಬಂಧಿತ ಆರೋಪಿಗಳು. ಇವರಿಂದ 53,300 ರೂ. ಮೌಲ್ಯದ 740 ಗ್ರಾಂ ತೂಕದ ಗಾಂಜಾ, 25 ಸಾವಿರ ರೂ. ಮೌಲ್ಯದ ಸ್ಕೂಟರ್, 2170ರೂ. ನಗದು, 2 ಮೊಬೈಲ್‌, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 98,770ರೂ. ಎಂದು ಅಂದಾಜಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸೆನ್ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕ ರಾಮಚಂದ್ರನಾಯಕ್ ಮತ್ತು ಪ್ರೊಬೆಶನರಿ ಡಿ.ವೈ.ಎಸ್.ಪಿ. ಗೀತಾ ಪಾಟೀಲ್‌ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸೆನ್ ಪೊಲೀಸ್‌ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್‌, ರಾಜೇಶ್, ವೆಂಕಟೇಶ್, ನಿಲೇಶ್, ರಾಘವೇಂದ್ರ, ಪ್ರಶಾಂತ್ ಮತ್ತು ಚರಣ್‌ರಾಜ್‌ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

Leave a Reply