Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯಲ್ಲಿ ಸಂಭ್ರಮದ ದೀಪಾವಳಿ ಆಚರಣೆ
    ಸುಜ್ಞಾನ ಪಿಯು ಕಾಲೇಜು & ವಿದ್ಯಾರಣ್ಯ ಶಾಲೆ

    ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯಲ್ಲಿ ಸಂಭ್ರಮದ ದೀಪಾವಳಿ ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಿಕ್ಷಣ ಸಂಸ್ಥೆಗಳು ದೇಶದ ಭವಿಷ್ಯದ ಭದ್ರ ಬುನಾದಿಗೆ ಕಾರಣವಾಗಿವೆ. ಹೆಚ್ಚು ಹೆಚ್ಚು ಉತ್ತಮ ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಂಡು ಶಿಕ್ಷಣ ಸರ್ವರಿಗೂ ಸಿಗುವಂತಾಗಬೇಕು.ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಪೋಷಕರು ಉತ್ತಮ ಶಿಕ್ಷಣ ನೀಡಿದರೆ ಅದುವೇ ಅಮೂಲ್ಯ ಆಸ್ತಿಯಾಗುತ್ತದೆ.ಇಂದಿನ ಯುವ ಪೀಳಿಗೆಗೆ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಪರಿಚಯಿಸುವುದು ಅತ್ಯಗತ್ಯ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಕೋಟೇಶ್ವರ ಯಡಾಡಿ- ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹೆಗ್ಗದ್ದೆ ಸ್ಟುಡಿಯೋ ಯೂಟ್ಯೂಬ್ ಚಾನಲ್ ಮುಖ್ಯಸ್ಥ ಸಂದೀಪ್ ಶೆಟ್ಟಿ ಹೆಗ್ಗದ್ದೆ ಮಾತನಾಡಿ ” ಮಕ್ಕಳು ಎಳವೆಯಲ್ಲಿಯೇ ಕನಸು ಕಾಣಬೇಕು ಮತ್ತು ನನಸಾಗಿಸಲು ಪ್ರಯತ್ನಿಸಬೇಕು”ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಮಾತನಾಡಿ ಮಕ್ಕಳಿಗೆ ನಮ್ಮ ನಾಡಿನ ಆಚಾರ ವಿಚಾರಗಳನ್ನು ತಿಳಿಸುವುದು ಇಂತಹ ಕಾರ್ಯಕ್ರಮಗಳ ಉದ್ದೇಶ ಎಂದು ಹೇಳಿದರು.

    ಗಮನ ಸೆಳೆದ ಗೋಪೂಜೆ, ಬಲಿಂದ್ರ ಪೂಜೆ, ವಸ್ತುಪ್ರದರ್ಶನ
    ಇಂದಿನ ಆಧುನಿಕ ಯುಗದಲ್ಲಿ ಜನ ಒತ್ತಡ ಹಾಗೂ ಇತರ ಕಾರಣಗಳಿಂದ ನಮ್ಮ ಹಿಂದಿನ ಪರಂಪರೆ, ಆಚಾರ ವಿಚಾರಗಳನ್ನು ಒಳಗೊಂಡ ಶ್ರೀಮಂತ ಸಂಸ್ಕೃತಿಯನ್ನು ಮರೆಯುತ್ತಿದ್ದು ಈ ಕಾಲಘಟ್ಟದ ಮಕ್ಕಳಿಗೆ  ಅದರ ಪರಿಚಯವೇ ಇಲ್ಲದಂತಾಗಿದೆ.ಕಾರ್ಯಕ್ರಮದಲ್ಲಿ ತುಳಸಿ ಪೂಜೆ, ಬಲಿಂದ್ರ ಪೂಜೆ, ಗೋಪೂಜೆ,ಹಳೆಯ ಕಾಲದ  ಪರಿಕರಗಳ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಿ ಮಕ್ಕಳಿಗೆ ತುಳಸಿ ಪೂಜೆ ಮತ್ತು ಗೋಪೂಜೆಯ ಮಹತ್ವ ತಿಳಿಸಲಾಯಿತು. ಹಿಂದಿನ ಸಂಪ್ರದಾಯದ ಪರಿಚಯ ಜೊತೆಗೆ ಮಕ್ಕಳಲ್ಲಿ ಮೌಲ್ಯಗಳನ್ನು ಹೆಚ್ಚಿಸಲು ದೀಪಾವಳಿಯ ಸಮಯದಲ್ಲಿ  ಆಚರಿಸುವ  ಬಲಿಂದ್ರ ಚಕ್ರವರ್ತಿಯ ತ್ಯಾಗದ  ಪ್ರತೀಕವಾದ ಬಲಿಂದ್ರ ಪೂಜೆಯು ವಿಶೇಷವಾಗಿತ್ತು.ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಬಳಸುತ್ತಿದ್ದ ರೈತಾಪಿ ಪರಿಕರಗಳಾದ ನೊಗ,  ಕಳಸಿಗೆ,ಸೇರು,ಸಿದ್ದಿ ಹಾಗೂ ದಿನಬಳಕೆಯ ಬೀಸುಕಲ್ಲು,ಕಡೆಗೋಲು,ಗ್ಯಾಸ್ ಲೈಟ್ ಇತ್ಯಾದಿ ಸುಮಾರು 500ಕ್ಕೂ ವಸ್ತುಗಳನ್ನು ಒಳಗೊಂಡ ಹಿಂದಿನ ಕಾಲದ ವಸ್ತುಗಳ ಪ್ರದರ್ಶನ ಮಕ್ಕಳ ಜಾನಪದ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಯಿತು.ವೈಜ್ಞಾನಿಕವಾಗಿ ಹೆಚ್ಚು ಪ್ರಗತಿ ಹೊಂದದ ಕಾಲದಲ್ಲಿಯೂ ನಮ್ಮ ಜನಪದರ ಸ್ರಜನಶೀಲತೆಯಿಂದ ಮೂಡಿ ಬಂದು ಬಹುಪಯೋಗಿಯಾಗಿದ್ದ ವಸ್ತುಗಳನ್ನು ಮಕ್ಕಳು ಕುತೂಹಲದಿಂದ ವೀಕ್ಷಿಸಿದರು.

    ಕಾರ್ಯಕ್ರಮದಲ್ಲಿ ಮೂಡಿಬಂದ   ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ವಿವಿಧ ನೃತ್ಯ ಪ್ರಕಾರಗಳನ್ನು ಒಳಗೊಂಡು  ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಹೆಗ್ಗದ್ದೆ ಸ್ಟುಡಿಯೋ ಯೂಟ್ಯೂಬ್ ಚಾನೆಲ್ ನ ಸಂದೀಪ್ ಶೆಟ್ಟಿ ಅವರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್ ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಉಪಸ್ಥಿತರಿದ್ದರು.ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ರಜತ್ ಭಟ್ ಸ್ವಾಗತಿಸಿ, ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ದ್ವಿತೀಯ ಪಿಯುಸಿಯಲ್ಲಿ ಸುಜ್ಞಾನ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

    10/04/2026

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ

    27/01/2026
    Leave A Reply Cancel Reply

    twelve − 5 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.