ಕುಂದಾಪ್ರ ಡಾಟ್ ಕಾಂ ಸುದ್ದಿ:
ಗಂಗೊಳ್ಳಿ: ಕರ್ನಾಟಕ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಬ್ರಹ್ಮಗಿರಿಯ ಜಿಲ್ಲಾ ಬಾಲ ಭವನದಲ್ಲಿ ನ.7ರಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವಾದ್ಯ ಸಂಗೀತ (ಕೊಳಲು) ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ಯಾಮ್ ಜಿ.ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದು, ಸತತ ಎರಡನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈತ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಉಪನ್ಯಾಸಕಿ ಮಾಲತಿ ಗಣೇಶ ಅವರ ಪುತ್ರ.










