ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಖೇಲೋ ಜನತಾ 2024 ಅತ್ಯಂತ ಸಡಗರ, ಸಂಭ್ರಮದಿಂದ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಅವರು ಮಾತನಾಡಿ, ಜನತಾ ಶಿಕ್ಷಣ ಸಂಸ್ಥೆ ಕ್ರೀಡಾ ರಂಗಕ್ಕೆ ಕೊಡುತ್ತಿರುವ ಪ್ರೋತ್ಸಾಹ ಅದ್ಭುತವಾಗಿದೆ. ವಿದ್ಯಾರ್ಥಿಗಳೇ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಬೇಕಾದರೆ ಕಾಲೇಜಿನ ಕ್ರೀಡಾಕೂಟಗಳು ಅಡಿಪಾಯವಾಗಿದೆ. ಧೈರ್ಯವಾಗಿ ಆಡಿ ಎಂದು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ವಾರ್ಷಿಕ ಕ್ರೀಡಾಕೂಟ ಮಹತ್ವಪೂರ್ಣವಾಗಿದೆ ಆ ಮೂಲಕ ಸಾವಿರಾರು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳನ್ನು ಅನಾವವರಣಗೊಳಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ಸೋಲೇ ಗೆಲುವಿನ ಸೋಪಾನ ಎಂದು ಶುಭ ಹಾರೈಸಿದರು.
ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ, ಕಾಲೇಜಿನ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಸಾಮೂಹಿಕ ಪಥ ಸಂಚಲನ ನೆರವೇರಿತು. ಮುಖ್ಯ ಅತಿಥಿಗಳು ಗೌರವ ರಕ್ಷೆಯನ್ನು ಸ್ವೀಕರಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕ ಉಮೇಶ ನಾಯ್ಕ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ, ಉಪನ್ಯಾಸಕಿ ರಂಜಿತಾ ಹೆಗ್ಡೆ ವಂದಿಸಿದರು.