ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ ರಜತಾದ್ರಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳು ಸ್ಪರ್ಧೆಗಳಲ್ಲಿ ಶಿಕ್ಷಕ ಸಹೋದರ- ಸಹೋದರಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸಾಮಾನ್ಯ ಜ್ಞಾನ ಸ್ಪರ್ಧೆಯಲ್ಲಿ ವಡೇರಹೋಬಳಿ ಸರಕಾರಿ ಪ್ರೌಢಶಾಲೆಯ ಸಮಾಜವಿಜ್ಞಾನ ಶಿಕ್ಷಕ ನಾರಾಯಣ ರಾಜು ದೇವಾಡಿಗ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ತಾರಾಮತಿ ದೇವಾಡಿಗ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರು ಉಪ್ಪುಂದ ಹೊಳೆಬಾಗಿಲು ಬೈಲ್ ಮನೆ ನಾಗ ದೇವಾಡಿಗ ಹಾಗು ಮಾಚಿ ದೇವಾಡಿಗ ದಂಪತಿಗಳ ಮಕ್ಕಳಾಗಿದ್ದಾರೆ.