Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಒನಕೆ ಓಬವ್ವ 18 ನೇ ಶತಮಾನದ ಓರ್ವ ವೀರ ವನಿತೆ ಮಹಿಳೆ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಒನಕೆ ಓಬವ್ವ 18 ನೇ ಶತಮಾನದ ಓರ್ವ ವೀರ ವನಿತೆ ಮಹಿಳೆ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಒನಕೆ ಓಬವ್ವಳ ನಿಸ್ವಾರ್ಥ ನಾಡಪ್ರೇಮ, ವೀರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನು ಆಯುಧವಾಗಿ ಹಿಡಿದು ಶತ್ರುಗಳನ್ನು ಸಂಹಾರ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮರಳಾಗಿ, ಸ್ತ್ರೀ ಶಕ್ತಿಯ ಸಂಕೇತವಾಗಿ ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ಉದ್ಘಾಟಿಸಿ, ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

    ಒನಕೆ ಓಬವ್ವ 18 ನೇ ಶತಮಾನದ ಓರ್ವ ವೀರ ವನಿತೆ ಮಹಿಳೆ. ಹೈದರಾಲಿಯ ಸೈನಿಕರು ಕೋಟೆಯನ್ನು ಮುತ್ತಿಗೆ ಹಾಕಿದ ಸಂದರ್ಭದಲ್ಲಿ, ಒಬ್ಬ ಸಾಮಾನ್ಯ ಹೆಣ್ಣುಮಗಳು, ಅಸಾಮಾನ್ಯವಾಗಿ ಯುದ್ಧಕಲೆಯ ಆಳ, ಅಗಲದ ಅರಿವಿಲ್ಲದೆ, ಊಟ ಮಾಡುತ್ತಿರುವ ಗಂಡನನ್ನು ಎಬ್ಬಿಸದೇ, ಶತ್ರು ಸೈನ್ಯವನ್ನು ಕೇವಲ ಒನಕೆಯಿಂದ ಸದೆ ಬಡಿದ ಆಕೆಯ ಸಾಹಸ, ಇಂದು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಸರಕಾರ ಒನಕೆ ಓಬವ್ವ ಜಯಂತಿಯನ್ನು ಆಚರಿಸುತ್ತಿರುವುದು ಇಡೀ ನಾರಿಕುಲಕ್ಕೆ ಸಂದ ಗೌರವ ಎಂದರು.

    ದೇಶದ ಇತಿಹಾಸವನ್ನು ಗಮನಿಸಿದಾಗ ಪುರುಷರಷ್ಟೇ ಮಹಿಳೆಯರು ಕೂಡ ಪ್ರಭಾವಶಾಲಿಗಳಾಗಿ ಅವರಿಗೆ ಸರಿಸಮಾನರಾಗಿ ದಿಟ್ಟತನದಿಂದ ಹೋರಾಡಿರುವುದನ್ನು ನಾವು ಕಾಣಬಹುದಾಗಿದೆ. ವೀರ ವನಿತೆ ಒನಕೆ ಓಬವ್ವಳ ಸಮಯಪ್ರಜ್ಞೆ, ಧೈರ್ಯ, ಪ್ರಾಮಾಣಕತೆ, ಸಂವೇದನಾಶೀಲತೆ ಮತ್ತು ಸಾಹಸ ದಂತಹ ಧೀಮಂತ ವ್ಯಕ್ತಿತ್ವವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

    ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಒನಕೆ ಓಬವ್ವ ಅವರ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿ, ವೀರವನಿತೆ ಓಬವ್ವ ಅವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು. ಅವರ ಧೈರ್ಯ, ಸಾಹಸ ಪ್ರತಿಯೊಬ್ಬರಿಗೂ ಸ್ಪೂರ್ತಿ ನೀಡುತ್ತದೆ. ಚಿತ್ರದುರ್ಗದ ಉಕ್ಕಿನಂತಹ ಏಳು ಸುತ್ತಿನ ಕೋಟೆಯನ್ನು ಹೈದರಾಲಿಯ ಸೈನಿಕರು ಕುತಂತ್ರದಿಂದ ವಶಪಡಿಸಿಕೊಳ್ಳಲು ಹಠಾತ್ತಾಗಿ ಆಕ್ರಮಣ ಮಾಡಿದಾಗ, ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು, ಶತ್ರುಗಳನ್ನು ಎದುರಿಸಿ, ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದ ಕೊಂದಿದ್ದಳು. ಅಂದಿನಿಂದ ಅವರು ಒನಕೆ ಓಬವ್ವ ಎಂದು ಪ್ರಸಿದ್ಧಿ ಹೊಂದಿದ್ದರು. ಪ್ರಸ್ತುತ ಆ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಎಂದು ಕರೆಯಲಾಗುತ್ತಿದೆ ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಕೋಶಾಧಿಕಾರಿ ನರಸಿಂಹಮೂರ್ತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    thirteen + 13 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.