Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾಮ ಪಂಚಾಯತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ
    ಉಡುಪಿ ಜಿಲ್ಲೆ

    ಗ್ರಾಮ ಪಂಚಾಯತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ, ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗಧಿಪಡಿಸಿ, ನವೆಂಬರ್ 23 ರಂದು ಮತದಾನ ನಡೆಸಲು ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ.

    Click Here

    Call us

    Click Here

    ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನವೆಂಬರ್ 21 ರ ಸಂಜೆ 5 ರಿಂದ ನವೆಂಬರ್ 23 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಈ ಮೇಲ್ಕಂಡ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿನ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

    ಈ ಸಂದರ್ಭದಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ಹಾಗೂ ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವುದನ್ನು ನಿಷೇಧಿಸಲಾಗಿರುತ್ತದೆ.

    ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿರುತ್ತದೆ ಹಾಗೂ ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿರುತ್ತದೆ.

    ಮತದಾನ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣಾ ಪ್ರಚಾರ ಮಾಡುವುದನ್ನು ಹಾಗೂ ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿರುತ್ತದೆ.

    Click here

    Click here

    Click here

    Call us

    Call us

    ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದ್ದು, ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ ಹಾಗೂ ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಇರುವುದಿಲ್ಲ.

    ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿರುತ್ತದೆ.

    ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿರುತ್ತದೆ.

    ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದಲ್ಲಿ ಕೂಡಲೇ ಅವುಗಳನ್ನು ವಶವಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.

    ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳಲ್ಲಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಕ್ರಮ ವಹಿಸಬೇಕು.

    ಮೇಲ್ಕಂಡ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ ಹಾಗೂ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕು.

    ಮತದಾನದ ದಿನದಂದು ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿರುತ್ತದೆ (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು/ ಸಿಬ್ಬಂದಿ ಹೊರತುಪಡಿಸಿ). ಮತದಾನ ದಿನದಂದು ಮತಗಟ್ಟೆಗಳ ಸುತ್ತ  200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್/ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ.

    ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

    09/12/2025

    ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

    09/12/2025

    ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ

    09/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ
    • ಮೂಡ್ಲುಕಟ್ಟೆ: ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಕಾರ್ಯಗಾರ
    • ಅಭ್ಯುದಯ – 2025: ಮದರ್ ತೆರೇಸಾ ಪಿ.ಯು ಕಾಲೇಜು ವಾರ್ಷಿಕೋತ್ಸವ ಸಂಪನ್ನ
    • ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ
    • ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿನಿಯರು ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್‌ಶಿಪ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d