ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ಈಶಾನ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಸರಕಾರ ರಾಜ್ಯ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು ಉಡುಪಿ, ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಈಶಾನ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.

Call us

Click Here

ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಚಟುವಟಿಕೆ ಆಧಾರಿತ  ಬೋಧನೆಯು ಮಕ್ಕಳ ವೈಜ್ಞಾನಿಕ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮತ್ತು    ಶಾಲೆಯಲ್ಲಿ ಆಯೋಜಿಸುವ ಶಾಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಗಳು  ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಿದೆ.

ಈಗಾಗಲೇ ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿಜೇತ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಪ್ರದೀಪ್ ಹಾಗೂ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಗೌರವಿಸಿದರು.

Leave a Reply