Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಕಾನೂನುಗಳನ್ನು ಜಾರಿಗೆ ತರುವುದರ ಜೊತೆಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಇವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ ಹಾಗೂ ಕಾರ್ಮಿಕರ ಭವಿಷ್ಯ ಶಿಧಿ ಸಂಘಟನೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ, ಕಾರ್ಮಿಕ ಇಲಾಖೆಯಿಂದ ಹಾಗೂ ಇತರೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರವುವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

    ಕಾರ್ಮಿಕ ಕಾಯಿದೆಗಳು ಬಲಿಷ್ಠವಾಗಿದ್ದು, ಇವುಗಳ ಬಗ್ಗೆ ಉದ್ಯೋಗದಾತರಿಗೆ ಕಾನೂನಿನ ಅರಿವು ಮೂಡಿಸಿ ಆ ಮೂಲಕ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳನ್ನು ಸರಿಯಾಗಿ ತಲುಪಿಸಿ, ಮಾನವೀಯ ನೆಲೆಯೊಂದಿಗೆ ಕಾನೂನಿನ ಅಡಿಯಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುವ ಬಗ್ಗೆ ತಿಳುವಳಿಕೆ ಮೂಡಿಸಿದಾಗ ಕಾಯಿದೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತವೆ ಎಂದರು.

    ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅವರ ಪರ ಕಾರ್ಮಿಕ ಕಾನೂನುಗಳಿವೆ. ಅವುಗಳನ್ನು ಅರ್ಥೈಸಿಕೊಂಡು ಉದ್ಯೋಗದಾತರು ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ಕಾರ್ಮಿಕರ ದುಡಿಮೆಗೆ ಅನುಗುಣವಾಗಿ ಕನಿಷ್ಠ ವೇತನ ಕಾಯಿದೆ ಅನ್ವಯ ಸಂಬಳ, ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಇ.ಎಸ್.ಐ, ಪಿಎಫ್, ಹೆಚ್ಚುವರಿ ಕೆಲಸ ಮಾಡಿಸಿಕೊಂಡಲ್ಲಿ ಹೆಚ್ಚುವರಿ  ಪೇಮೆಂಟ್ ನೀಡುವುದು, ಕಾರ್ಮಿಕರು ಸುರಕ್ಷತೆಯಿಂದ ಕೆಲಸ ಮಾಡಲು ಸುರಕ್ಷಿತ ವಾತಾವರಣವನ್ನು ಕಲ್ಪಿಸಬೇಕು ಎಂದರು.

    ಕಾರ್ಮಿಕ ಇಲಾಖೆಯ ಕಾರ್ಯಚಟುವಟಿಕೆಗಳು ಹಾಗೂ ಯೋಜನೆಗಳ ಬಗ್ಗೆ ಸಂಬಂಧಿಸಿದ ಕಾರ್ಮಿಕರು, ಮಾಲೀಕರು ಹಾಗೂ ಸಾರ್ವಜನಿಕರಿಗೆ ತಿಳುವಳಿಕೆ ನಿಡುವ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಉದ್ಯೋಗದಾತರು, ಗುತ್ತಿಗೆದಾರರು ಹಾಗೂ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಮಿಕರ ಸುರಕ್ಷತೆಗೆ ಅನುಗುಣವಾಗಿ ಕಾನೂನುಗಳನ್ನು ರೂಪಿಸಿವೆ. ಸರಕಾರದಿಂದ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಹಲವು ಸವಲತ್ತುಗಳಿವೆ. ಈ ಬಗ್ಗೆ ಹಲವರಿಗೆ ಅರಿವೇ ಇರುವುದಿಲ್ಲ. ಉದ್ಯೋಗದಾತರು ಹಾಗೂ ಸಂಬಂದಪಟ್ಟ ಇಲಾಖೆಗಳು ಇವುಗಳನ್ನು ತಲುಪಿಸುವಲ್ಲಿ ಕಾರ್ಯಪ್ರವೃತ್ತರಾಗುವುದರೊಂದಿಗೆ, ಉದ್ಯೋಗದಾತರು ಸ್ವ-ಜವಾಬ್ದಾರಿಗಳನ್ನು ಅರಿತು ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳಬೇಕು ಎಂದರು

    ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಪ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಮಿಕರ ಕಲ್ಯಾಣವನ್ನು ಆದ್ಯತೆಯನ್ನಾಗಿಸಿಕೊಂಡು ಸರಕಾರ ಹಾಗೂ ಇಲಾಖೆಯು ಕಾರ್ಮಿಕರು ಸಬಲರಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ಕಾರ್ಮಿಕರ ಹಿತಕಾಯುವಲ್ಲಿ ಹಾಗೂ ಜನಪರ ಯೋಜನೆಗಳನ್ನು ಸಕಾಲದಲ್ಲಿ ಕಾರ್ಮಿಕರುಗಳಿಗೆ ತಲುಪಿಸಿದೆ ಎಂದರು.

    ಜಿಲ್ಲೆಯಲ್ಲಿ ಉದ್ಭವಿಸುವ ಕೈಗಾರಿಕಾ ವಿವಾದಗಳನ್ನು ಸೌಹಾರ್ದಯುತ ನೆಲೆಯಲ್ಲಿ ಬಗೆಹರಿಸಿ, ಕೈಗಾರಿಕಾ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮೇಲ್ವಿಚಾರಣೆ ನಡೆಸುತ್ತಾ ಬಂದಿದೆ. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಿ, ಅವರ ಸ್ಥಿತಿಗತಿಗಳನ್ನು ಉತ್ತೇಜಿಸುವುದರ ಜೊತೆಗೆ ಕೈಗಾರಿಕೆಗಳ ಬೆಳವಣಿಗೆಗೆ ಅನುಕೂಲಕರ ವಾತಾವರಣ ಕಲ್ಪಿಸಿದೆ ಎಂದರು.

    ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ. ಆರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕರು ಹಾಗೂ ಮಾಲೀಕರ ನಡುವೆ ಉತ್ತಮ ಬಾಂಧವ್ಯ ಇರಬೇಕು. ಕಾರ್ಮಿಕರುಗಳಿಗೆ ಸೂಕ್ತ ಸೌಲಭ್ಯ ಒದಗಿಸಿದಾಗ ಕಾರ್ಮಿಕರು ಹಾಗೂ ಮಾಲೀಕರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲ ಎಂದ ಅವರು, ಉದ್ಯೋಗ ನೀಡಿದಾಗ ಕಾರ್ಮಿಕರ ಅಗತ್ಯ ದಾಖಲೆಗಳನ್ನು ಕಾನೂನಿನ ಪ್ರಕಾರ ನಿರ್ವಹಣೆ ಮಾಡುವುದು ಉದ್ಯೋಗದಾತರ ಜವಾಬ್ದಾರಿ ಎಂದರು.  

    ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಕಾರ್ಮಿಕ ಇಲಾಖೆಯಿಂದ ಹಾಗೂ ಇತರೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.

    ಕಾರ್ಯಾಗಾರದಲ್ಲಿ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ, ಕಾರ್ಮಿಕ ಭವಿಷ್ಯ ನಿಧಿ ಸಂಘಟನೆಯ ಜಿಲ್ಲಾ ಪ್ರಾದೇಶಿಕ ಆಯುಕ್ತ ಸಂದೀಪ್ ಕುಮಾರ್, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥö್ಯ ಇಲಾಖೆಯ ಸಹಾಯಕ ನಿರ್ದೇಶಕ ಪ್ರತಾಪ್ ಹೆಚ್ ಎ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ಮತ್ತು ವೈದ್ಯಕೀಯ ಸೇವೆಯ ಆಡಳಿತ ವಿಮಾ ವೈದ್ಯಾಧಿಕಾರಿ ಡಾ. ಹೇಮಂತ್ ಕುಮಾರ್, ಮಂಗಳೂರು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಬಿ.ಆರ್ ಕುಮಾರ್, ಕಾರ್ಮಿಕ ನಿರೀಕ್ಷಕರುಗಳು, ಗುತ್ತಿಗೆದಾರರು, ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕಿ ಅಮೃತಾ ಸ್ವಾಗತಿಸಿ, ಮಂಜುಳಾ ಜಿ. ತೆಕ್ಕಟ್ಟೆ ನಿರೂಪಿಸಿ, ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    fifteen − 2 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.