Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅತಿವೇಗದಿಂದ ಚಲಿಸಿದ ಟಿಪ್ಪರ್ – ಹಾಲಾಡಿ ರಸ್ತೆಯಲ್ಲಿ ಸರಣಿ ಅಪಘಾತ
    ಊರ್ಮನೆ ಸಮಾಚಾರ

    ಅತಿವೇಗದಿಂದ ಚಲಿಸಿದ ಟಿಪ್ಪರ್ – ಹಾಲಾಡಿ ರಸ್ತೆಯಲ್ಲಿ ಸರಣಿ ಅಪಘಾತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವೇಗದಲ್ಲಿ ಚಲಿಸುತ್ತಿದ್ದ ಟಿಪ್ಪರ್ ಅಭಿಮುಖವಾಗಿ ಬರುತ್ತಿದ್ದ ಈಚರ್ ವಾಹನ, ಕಾರು ಹಾಗೂ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದ ಘಟನೆ ಇಲ್ಲಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣ್ಸೆಮಕ್ಕಿ – ಹಾಲಾಡಿ ಪ್ರಮುಖ ಸಂಪರ್ಕ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

    Click Here

    Call us

    Click Here

    ಹುಣ್ಸೆಮಕ್ಕಿಯಿಂದ ತೆಕ್ಕಟ್ಟೆ ಕಡೆಗೆ ಅತೀ ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಮೊದಲು ಎದುರಿನಿಂದ ಬರುತ್ತಿದ್ದ ಈಚರ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಅನಂತರ ಮುಂಭಾಗದಲ್ಲಿ ಚಲಿಸುತ್ತಿದ್ದ ಸ್ಯಾಂಟ್ರೋ ಝಿಂಗ್ ಕಾರಿಗೆ ಢಿಕ್ಕಿ ಹೊಡೆದುಕೊಂಡು ಎಳೆದು ಸಾಗಿದೆ. ಇದೇ ವೇಳೆ ಕೋಟೇಶ್ವರದಿಂದ ಬಿದ್ಕಲ್‌ಕಟ್ಟೆ ಕಡೆಗೆ ಸಾಗುತ್ತಿದ್ದ ಮಾರುತಿ ಸುಜುಕಿ ಸೂಪರ್ ಕ್ಯಾರಿ ಪಿಕ್‌ಅಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಹಾಗೂ ಪಿಕಪ್ ವಾಹನಗಳು ನಜ್ಜುಗುಜ್ಜಾಗಿದೆ. ಪಿಕಪ್ ವಾಹನ ಆಯತಪ್ಪಿ ಚರಂಡಿಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

    ಟಿಪ್ಪರ್ ಚಾಲಕ ಅತಿವೇಗದಿಂದ ಬಂದು ಈಚರ್ ಹಾಗೂ ಸ್ಯಾಂಟ್ರೋ ಝಿಂಗ್ ಕಾರಿಗೆ ಢಿಕ್ಕಿ ಹೊಡೆದು ಎಳೆದೊಯ್ಯುತ್ತಿರುವ ದೃಶ್ಯ ಇಲ್ಲಿನ ಹೊಟೇಲ್ ವೊಂದರ ಅಳವಡಿಸಿದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಕೋಟ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.