Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಕರಾವಳಿ ಸೊಗಡಿನ ದಿಂಸೋಲ್ ಚಲನಚಿತ್ರದ ಪೋಸ್ಟರ್ ಬಿಡುಗಡೆ
    ಊರ್ಮನೆ ಸಮಾಚಾರ

    ಕುಂದಾಪುರ: ಕರಾವಳಿ ಸೊಗಡಿನ ದಿಂಸೋಲ್ ಚಲನಚಿತ್ರದ ಪೋಸ್ಟರ್ ಬಿಡುಗಡೆ

    Updated:14/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ಕುಂದಾಪುರ ಮೂಲದ ಬೀಜಾಡಿಯ ನಾಗೇಂದ್ರ ಗಾಣಿಗ ಇವರ ನಿರ್ದೇಶನದ  ಕನ್ನಡ ಚಲನಚಿತ್ರ ಕುಂದಾಪುರ ಭಾಷೆಯ ಜತೆಗೆ ಕರಾವಳಿ ಸಂಸ್ಕೃತಿಯ ಸೊಗಡನ್ನು ಬಿಂಬಿಸುವ ದಿಂಸೋಲ್ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ತಲ್ಲೂರಿನ ರಾಜಾಡಿಯ ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು. 

    Click Here

    Call us

    Click Here

    ಅಭಿರಾಮಚಂದ್ರ ಸಿನಿಮಾ ಮೂಲಕ ನಿರ್ದೇಶಕನಾಗಿ  ಕಾರ್ಯನಿರ್ವಹಿಸಿದ ಆ ಚಿತ್ರದಲ್ಲಿ ಬಾಲ್ಯ, ಸ್ನೇಹದ ಜೊತೆಗೆ ತ್ರಿಕೋನ ಪ್ರೇಮ ಕಥೆ ಹೇಳಿದ್ದ ಅವರಿಗೆ ಕರಾವಳಿ ಸಂಸ್ಕೃತಿಯ ಸೊಗಡನ್ನು ದಿಂಸೋಲ್ ಸಿನಿಮಾ ಮೂಲಕ ಹೇಳಲು  ಹೊರಟಿದ್ದಾರೆ.

    ದಿಂಸೋಲ್ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನ್ನು ವಕೀಲರಾದ ಟಿ.ಬಿ.ಶೆಟ್ಟಿ ಅವರು ಅನಾವರಣ ಮಾಡಿದ್ದಾರೆ. ನಟರಾದ ರಘು ಪಾಂಡೇಶ್ವರ್, ಯತೀಶ್ ಬೈಕಂಪಾಡಿ, ಸ್ಥಳೀಯ ಪ್ರಮುಖರು, ಗೋಪಾಡಿಯ ಮಹಿಳಾ ಭಜನಾ ಕುಣಿತ ತಂಡದವರು ಮತ್ತು ಕುಂದಾಪುರದ ಚಂಡೆ ತಂಡದ ಸದಸ್ಯರು ಉಪಸ್ಥಿತರಿದ್ದರು.

    ನಾಗೇಂದ್ರ ಗಾಣಿಗ ಇವರ ನಿರ್ದೆಶನದಲ್ಲಿ ಮೂಡಿಬಂದ ಈ ಸಿನಿಮಾಕ್ಕೆ ಕೆಜಿಎಫ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರ್ ಸಂಗೀತ ನಿರ್ದೆಶನನವಿದೆ. ಕರಾವಳಿ ಭಾಗದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ನಡೆಯುವ ಆಚರಣೆಯೇ ಈ ಒಂದು ದಿಂಸೋಲ್. ದಿಂಸೋಲ್ ಜತೆಗೆ ಕರಾವಳಿ ಎಲ್ಲ ಸಂಸ್ಕೃತಿಯನ್ನು ಈ ಚಿತ್ರದ ಮೂಲಕ ನಾಗೇಂದ್ರ ಅವರು ದೃಶ್ಯರೂಪಕ್ಕೆ ಇಳಿಸುತ್ತಿದ್ದಾರೆ. ಫಸ್ಟ್ ಲುಕ್ ಸಂಪೂರ್ಣ ಕೆಂಪು ಬಣ್ಣದಿಂದ ಕೂಡಿದ್ದು ಆದಿದೇವಿಯು ರಕ್ತೇಶ್ವರಿ ಉಗ್ರ ಅವತಾರ ತಾಳಿದ್ದ ಈ ಪೋಸ್ಟರ್ ನಾನಾ ಕಥೆ ಹೇಳುತ್ತದೆ.

    ಅಭಿರಾಮಚಂದ್ರ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದ ರಥಕಿರಣ್ ಹಾಗೂ ಶಿವಾನಿ ರೈ ದಿಂಸೋಲ್ ಚಿತ್ರದಲ್ಲಿಯೂ  ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ನಟಿ ಮಾನಸಿ ಸುಧೀರ್, ದೇವದಾಸ್ ಕಾಪಿಕಾಡ್, ರಘು ಪಾಂಡೇಶ್ವರ್, ದೀಪಕ್ ರೈ ಪಣಾಜಿ, ಮೈಮ್ ರಾಮ್ ದಾಸ್, ಗಣೇಶ್ ಕಾರಂತ್, ಸೂರಜ್ ಹಾಗೂ ಸುರಭಿ ಹಾಗೂ ಕರಾವಳಿ ಭಾಗದ ಸಾಕಷ್ಟು ರಂಗಭೂಮಿ ಕಲಾವಿದರು ತಾರಾ ಬಳಗದಲ್ಲಿದ್ದಾರೆ. ಮುಂಬರುವ ಡಿಸೆಂಬರ್ ತಿಂಗಳಲ್ಲಿ ಇಡೀ ಕರಾವಳಿ ಭಾಗದಲ್ಲಿಯೇ ಈ ಚಿತ್ರದ ಶೂಟಿಂಗ್ ಕಾರ್ಯ ನಡೆಯಲಿದೆ.

    Click here

    Click here

    Click here

    Call us

    Call us

    ಸಂದೀಪ್ ವಲ್ಲೂರಿ ಛಾಯಾಗ್ರಹಣ, ಪ್ರತೀಕ್ ಶೆಟ್ಟಿ ಸಂಕಲನ, ನಾಗೇಂದ್ರ ಗಾಣಿಗ ಸಾಹಿತ್ಯ, ಸಂಭಾಷಣೆ ಬರೆಯುತ್ತಿದ್ದು ಸಂಹಿತಾ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಈ ದಿಂಸೋಲ್ ಚಿತ್ರ ಮೂಡಿಬರಲಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

    07/10/2026

    ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

    07/10/2026

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ‘ಆಡ್-ವೆಂಚರ್‌ʼ ಜಾಹೀರಾತು ಸ್ಪರ್ಧೆ ಯಶಸ್ವಿ

    07/10/2026
    Leave A Reply Cancel Reply

    1 + seven =

    Call us

    Click Here

    Call us

    Call us

    Call us
    Highest Viewed Recently
    • ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
    • ಉಡುಪಿ: ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ
    • ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
    • ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ‘ಆಡ್-ವೆಂಚರ್‌ʼ ಜಾಹೀರಾತು ಸ್ಪರ್ಧೆ ಯಶಸ್ವಿ
    • ಅ.11ರಂದು ಬೈಂದೂರಿನಲ್ಲಿ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.