ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದ ಕಾಡಿನಬೆಟ್ಟು ನಿವಾಸಿ ವಿಶ್ವನಾಥ ಅವರ ಪತ್ನಿ ಸುಶೀಲಾ (56) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ನಡೆದಿದೆ.
ಪತಿ ವಿಶ್ವನಾಥ ಅವರು ಬೆಳಗ್ಗೆ 8 ಗಂಟೆಗೆ ಮನೆಯಿಂದ ಮೊಳಹಳ್ಳಿಗೆ ತೆರಳಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮನ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂದು ತಿಳಿಯಲಾಗಿದೆ.
ಅವರ ಸಹೋದರ ಕುಶಲ ಹಳ್ನಾಡು ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.