ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ತಗ್ಗರ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಗುರುವಾರ ಅರಳು ಪ್ರತಿಭೆ – ವಿದ್ಯಾರ್ಥಿಗಳ ಸೇವೆ ಸಾಧನೆಯನ್ನು ಗುರುತಿಸುವ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ವೇಳೆ ಶಾಲೆಯ ಆದರ್ಶ ವಿದ್ಯಾರ್ಥಿ ಪ್ರಶಸ್ತಿಯನ್ನು 8ನೆಯ ತರಗತಿ ವಿದ್ಯಾರ್ಥಿನಿ ಆಶಿಕಳಿಗೆ ನೀಡಿ ಸನ್ಮಾನಿಸಲಾಯಿತು.ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಪ್ರೋತ್ಸಾಹಿಸುವ ಸಲುವಾಗಿ ಅತ್ತ್ಯುತ್ತಮ ಸಚಿವ, ಅತ್ತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಗಳನ್ನು ನೀಡಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿಯಾದ ಮಹಾದೇವ ಬಿಲ್ಲವ ಅವರು ಮಕ್ಕಳನ್ನುದ್ದೇಶಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಸಿಗುವಂತಹ ಗುಣಮಟ್ಟದ ಶಿಕ್ಷಣ ಹಾಗೂ ಸೌಲಭ್ಯ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಇದರ ಸದ್ಭಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯುವಂತಾಗಲಿ ಎಂದರು.
ಎಸ್.ಡಿ.ಎ.ಸಿ ಅಧ್ಯಕ್ಷರಾದ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿಯವರು, ಉಪಾಧ್ಯಕ್ಷರಾದ ನಾಗವೇಣಿ, ಎಸ್.ಡಿ.ಎ.ಸಿ ಮಾಜಿ ಅಧ್ಯಕ್ಷರಾದಂತಹ ಪ್ರಭಾಕರ ಗಾಣಿಗ, ವಿದ್ಯಾರ್ಥಿ ನಾಯಕ ವಿನೀತ್, ಉಪನಾಯಕ ಪ್ರೀತೇಶ್, ಎಸ್.ಡಿ.ಎ.ಸಿ ಸದಸ್ಯರು ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಮೂಕಾಂಬಿಕಾ ಸ್ವಾಗತಿಸಿ, ಅನ್ವಿತ ವಂದಿಸಿದರು. ಆಶಿಕಾ ಹಾಗೂ ಲಾವಣ್ಯ ನಿರೂಪಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.