ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಏಕಮುಖ ರಸ್ತೆಯ ಮುಳ್ಳಿಕಟ್ಟೆ ಜಂಕ್ಷನ್ ಬಳಿಯಿಂದ ಅರಾಟೆಗೆ ಚಲಿಸುತ್ತಿದ್ದ ಪ್ಯಾಸೆಂಜರ್ ರಿಕ್ಷಾಕ್ಕೆ, ತ್ರಾಸಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡಿದ್ದ ರಿಕ್ಷಾ ಸುಮಾರು ಹತ್ತು ಅಡಿ ಆಳದ ಚರಂಡಿಗೆ ಉರುಳಿ ಬಿದ್ದಿದೆ.
ಅಪಘಾತದಲ್ಲಿ ಪ್ರಯಾಣಿಸುತ್ತಿದ್ದ ಜಯಲಕ್ಷ್ಮೀ (39) ಜಲಜಾಕ್ಷಿ (36) ರಿಕ್ಷಾ ಚಾಲಕ ರವಿ (41) ಗಾಯಗೊಂಡಿದ್ದಾರೆ. ರಿಕ್ಷಾದ ಹಿಂಭಾಗ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಗಂಗೊಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










