ನ. 17ರಂದು ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್‌ನಿಂದ ಕೊರಗ ಕುಟುಂಬಗಳಿಗೆ 14 ಮನೆಗಳ ಹಸ್ತಾಂತರ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ ಜನ್ನಾಡಿ ಮತ್ತು ಮಣಿಗೇರಿ ಕೊರಗರ ಕಾಲೋನಿಯಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ 14 ಉಚಿತ ಮನೆಗಳ ಗೃಹ ಪೂಜೆ ಮತ್ತು ಲೋಕಾರ್ಪಣೆ ನ. 17ರಂದು ಬೆಳಿಗ್ಗೆ 10 ಗಂಟೆಗೆ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಜನ್ನಾಡಿ ಕೊರಗರ ಕಾಲೋನಿಯಲ್ಲಿ ನಡೆಯಲಿದೆ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹಾಲಾಡಿ ನಾಗರಾಜ ಶೆಟ್ಟಿ ಹೇಳಿದರು.

Call us

Click Here

ಅವರು ಕುಂದಾಪುರದ ಪ್ರೆಸ್ ಕ್ಲಬ್‌ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಉಡುಪಿ ಪೇಜಾವರ ಶ್ರೀ ಅಧೋಕ್ಷಜ ತೀರ್ಥ ಸಂಸ್ಥಾನದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೃಹ ಪೂಜೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಕ್ಕುಪತ್ರ ಮತ್ತು ಕೀಲಿಕೈ ವಿತರಿಸಲಿದ್ದಾರೆ.

ಟ್ರಸ್ಟ್ ಅಧ್ಯಕ್ಷ ಡಾ. ಹೆಚ್.ಎಸ್. ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪರಿಶಿಷ್ಟಜಾತಿ ಮತ್ತು ಬುಡಕಟ್ಟು ಉಪಯೋಜನೆ ನಿರ್ದೇಶಕಿ ಊರ್ಮಿಳ, ಕೊರಗಾಭಿವೃದ್ಧಿ ಸಂಸ್ಥೆಗಳ ಅಧ್ಯಕ್ಷೆ ಸುಶೀಲ ನಾಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಮಾಸೆಬೈಲು ಗ್ರಾ.ಪಂ. ಸದಸ್ಯ ಕೃಷ್ಣ ಪೂಜಾರಿ ಮಾತನಾಡಿ, ತೀರ ದುಸ್ಥಿತಿಯಲ್ಲಿ ವಾಸಿಸುತ್ತಿರುವ ಕೊರಗ ಕುಟುಂಬಗಳನ್ನು ಗಮನಿಸಿದ ಡಾ.ಎಚ್.ಎಸ್ ಶೆಟ್ಟಿ ಅವರು ಈ ಸ್ಥಳಗಳಿಗೆ ಭೇಟಿ ನೀಡಿ ಉಚಿತವಾಗಿ ಮನೆ ನಿರ್ಮಿಸಿ ಕೊಡುವ ಕಾರ್ಯಕ್ಕೆ ಮುಂದಾದರು. ಕಳೆದ ಮಾರ್ಚ್ 21ರಂದು ಭೂಮಿ ಪೂಜೆ ನೆರವೇರಿಸಲಾಯಿತು. ಈಗ 14 ಮನೆಗಳು ನಿರ್ಮಾಣಗೊಂಡಿದೆ. ಕೊರಗ ಕುಟುಂಬಗಳಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿಯನ್ನು ಅವರು ಹೊಂದಿದ್ದಾರೆ ಎಂದರು.

Click here

Click here

Click here

Click Here

Call us

Call us

Leave a Reply