ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮ ಜನತಾ ಪರ್ವ 2K24 ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮವು ಅದ್ದೂರಿಯಾಗಿ ಸಂಪನ್ನಗೊಂಡಿತು.

Call us

Click Here

ಕಾರ್ಯಕ್ರಮವನ್ನು ಗಂಗೊಳ್ಳಿಯ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಅಧ್ಯಕ್ಷರಾದ  ಜಿ. ವೆಂಕಟೇಶ ಶೆಣೈ ಅವರು ಉದ್ಘಾಟಿಸಿ, ಜನತಾ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆ ಮಹತ್ತರವಾದದ್ದು, ವಿದ್ಯಾರ್ಥಿಗಳ ಪ್ರತಿಭೆಯ ವಿಕಾಸಕ್ಕೆ ಜನತಾ ಸಂಸ್ಥೆಯ ಕಾರ್ಯಚಟುವಟಿಕೆಗಳು ಪ್ರಶಂಸನೀಯ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಕಾಲೇಜಿನ ವಾರ್ಷಿಕ ವರದಿ ವಾಚನ ಮಾಡಿ, ಶಿಕ್ಷಣ, ಕ್ರೀಡೆ, ಕಲೆ, ಸಾಂಸ್ಕೃತಿಕ, ಸಾಹಿತ್ಯಕ ಈ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆ ಮಹತ್ತರವಾಗಿದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಅಹರ್ನಿಶಿ ಶ್ರಮಿಸುತ್ತಿದ್ದೇವೆ ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲಿಸಲಿ ಎಂದು ಶುಭ ಹಾರೈಸಿದರು.

ಕುಂದಾಪುರದ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ಜಿ.ಎಮ್.ಗೊಂಡ ಅವರು ಕಾಲೇಜಿನ ವಾರ್ಷಿಕ ಸಂಚಿಕೆ ‘ಜನತಾ ಜ್ಞಾನ-ತರಂಗ’ ಅನಾವರಣಗೊಳಿಸಿ, ವಿದ್ಯಾರ್ಥಿಗಳ ಪ್ರತಿಭಾ ಹಂದರಕ್ಕೆ ಜನತಾ ಶಿಕ್ಷಣ ಸಂಸ್ಥೆಯ ಪಾತ್ರ ಬಹು ದೊಡ್ಡದು, ಅಕ್ಷರ ಲೋಕವನ್ನು ದಾಖಲಿಸಲು, ವಿದ್ಯಾರ್ಥಿ ಬರೆವಣಿಗೆಯ ಸಾಮರ್ಥ್ಯವನ್ನು ಹೆಚ್ಚಿಸಲು ವಿದ್ಯಾರ್ಥಿ ಸಂಚಿಕೆಯನ್ನು ಹೊರ ತಂದಿರುವ ಕಾರ್ಯ ಶ್ಲಾಘನೀಯ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ  ಸಹಕಾರಿ ಸಂಘ ನಿಯಮಿತ ಇದರ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ  ಉದಯ ಕುಮಾರ್ ಹಟ್ಟಿಯಂಗಡಿ ಅವರು ಮಾತನಾಡಿ, ‘ವಿದ್ಯಾರ್ಥಿಗಳೇ ಪದವಿಪೂರ್ವ ಶಿಕ್ಷಣಕ್ಕೆ ಜನತಾ ಸಂಸ್ಥೆಯ ಕೊಡುಗೆ ಬಹು ದೊಡ್ಡದು, ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದರು’.

Click here

Click here

Click here

Click Here

Call us

Call us

ಝೀ ವಾಹಿನಿಯ ಮಹಾನಟಿ ರಿಯಾಲಿಟಿ ಶೋ ಪೈನಲಿಸ್ಟ್ ಆರಾಧನ ಭಟ್ ಪ್ರತಿಭೆಗಳಿಗೆ ಅದ್ಭುತ ವೇದಿಕೆಯನ್ನು ಒದಗಿಸಿಕೊಡುತ್ತಿರುವ ಸಂಸ್ಥೆಯ ಕಾರ್ಯಕ್ಕೆ ಅಭಿನಂದಿಸಿ ವಿದ್ಯಾರ್ಥಿ ಪ್ರತಿಭೆಗಳಿಗೆ ಶುಭ ಹಾರೈಸಿದರು.

ಕುಂದಾಪುರದ ಹಾಸ್ಯ ಕಲಾವಿದರಾದ ನಾಗರಾಜ ತೆಕ್ಕಟ್ಟೆ ಅವರು ಮಾತನಾಡಿ, ಪ್ರತಿಭೆ ಎಂದರೆ ಜನತಾ, ಜನತಾ ಎಂದರೆ ಪ್ರತಿಭೆಯನ್ನು ಬೆಳಗಿಸುವ ಮಹಾಮಂದಿರ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಜನತಾ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.

ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಕ ಹಾಗೂ ಕ್ರೀಡಾ ವಿಭಾಗಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಅಪರಾಹ್ನದ ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ವೈಭವದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ಕಾಲೇಜಿನ ಬೋಧಕ/ಬೋಧಕೇತರ ವ್ರಂದದವರು, ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಅಶ್ವಿನಿ ವಂದಿಸಿದರು.

Leave a Reply