ಜಾನುವಾರು ಸಾಗಿಸುತ್ತಿದ್ದ ಇನ್ಸುಲೇಟರ್‌ ವಾಹನ ಪಲ್ಟಿ, ಚಾಲಕ ಪರಾರಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಅತಿ ವೇಗದಿಂದ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.

Call us

Click Here

ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮಧ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ.

ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply