ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಬೆಂಗಳೂರು, ಇದರ ಬೈಂದೂರು ತಾಲೂಕಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಿಕ್ಷಕ ಶೇಖರ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ.

,ಬೈಂದೂರು ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಶೇಖರ್ ಪೂಜಾರಿ ಅವರು ಚುನಾಯಿತರಾದರು. ಇವರು ಕಿರಿಮಂಜೇಶ್ವರ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಬೈಂದೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಖಜಾಂಚಿಯಾಗಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಉದಯಕುಮಾರ್ ಎಂ.ಪಿ, ರಾಜ್ಯ ಪರಿಷತ್ ಸದಸ್ಯರಾಗಿ ವೈದ್ಯಾಧಿಕಾರಿ ಡಾ. ರಾಜೇಶ್ ಆಯ್ಕೆಯಾಗಿದ್ದಾರೆ.
► ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಡಾ. ನಾಗೇಶ್ ಆಯ್ಕೆ – https://kundapraa.com/?p=79206 .










