Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರಣ್ಯ ಶಾಲೆಯಲ್ಲಿ ಉಚಿತ ಎನ್.ಎಂ.ಎಂ.ಎಸ್‌. ತರಬೇತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ವಿದ್ಯಾರಣ್ಯ ಶಾಲೆಯಲ್ಲಿ ಉಚಿತ ಎನ್.ಎಂ.ಎಂ.ಎಸ್‌. ತರಬೇತಿ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕರ್ನಾಟಕ  ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಉಚಿತ ಎನ್. ಎಂ.ಎಂ.ಎಸ್.ತರಬೇತಿ ಕಾರ್ಯಾಗಾರ ವಿದ್ಯಾರಣ್ಯ ಶಾಲೆಯಲ್ಲಿ ನಡೆಯಿತು.

    Click Here

    Call us

    Click Here

    ಈ ಕಾರ್ಯಾಗಾರವು ವಿದ್ಯಾರಣ್ಯ ಶಾಲೆಯ ಸಹಕಾರದೊಂದಿಗೆ ಆರು ವಾರಗಳು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ.

    ಕಾರ್ಯಕ್ರಮದ ಉದ್ಘಾಟಿಸಿದ ಎನ್.ಎಂ.ಎಂ.ಎಸ್. ಜಿಲ್ಲಾ ನೋಡೆಲ್ ಆಗಿರುವ ಚಂದ್ರ ನಾಯ್ಕ್ ಮಾತನಾಡುತ್ತ, “ಮಕ್ಕಳು ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚು ಮಕ್ಕಳು ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತರಬೇಕು. ಪ್ರಸ್ತುತ ವರ್ಷ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಬಡತನವನ್ನು ಹೊಂದಿರುವ ಪ್ರತಿಭಾನ್ವಿತ ಮಕ್ಕಳು ಬಡತನದ ಕಾರಣವಾಗಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸದೆ ಮುಂದುವರಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಎನ್. ಎಂ.ಎಂ.ಎಸ್.ಯೋಜನೆಯನ್ನು ಜಾರಿಗೆ ತಂದಿದ್ದು,ಇಂದು ಈ ಯೋಜನೆಯಿಂದ ಹಲವಾರು ಪ್ರತಿಭಾನ್ವಿತ ಮಕ್ಕಳು ಶಿಕ್ಷಣವನ್ನು ಮುಂದುವರಿಸಲು ಸಹಕಾರಿಯಾಗಿದೆ” ಎಂದರು.

    ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಮಾತನಾಡಿ, “ಇಂತಹ ತರಬೇತಿಗಳನ್ನು ಮಕ್ಕಳು ಸದುಪಯೋಗಪಡಿಸಿಕೊಂಡು ಆಯ್ಕೆಯಾದಾಗ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ  ಮಕ್ಕಳು ಕಲಿಕೆಗೆ ಪೂರಕವಾಗುವ ಹಲವಾರು ತರಬೇತಿಗಳನ್ನು ಪಡೆದುಕೊಂಡು ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆ ತೋರಿದಾಗ ಉತ್ತಮ ಭವಿಷ್ಯ ಕಾಣಲು ಸಾಧ್ಯವಾಗುತ್ತದೆ. ಸರಕಾರದ ಇಂತಹ ಯೋಜನೆ ಗಳು ಮಕ್ಕಳ ಸರ್ವಾಂಗೀಣ ಪ್ರಗತಿಗೆ ನೆರವಾಗುತ್ತದೆ ಮತ್ತು ಯಶಸ್ವಿಗೆ ದಾರಿದೀವಿಗೆಯಾಗುತ್ತದೆ. ಹಳ್ಳಿಯ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ಯೋಜನೆಯ ಹೆಚ್ಚು ಹೆಚ್ಚು ಪ್ರಯೋಜನವನ್ನು ಪಡೆಯಬೇಕು. ಮಕ್ಕಳ ಶ್ರೇಯೋಭಿವೃದ್ಧಿಗೆ ಸಹಾಯಕವಾಗುವ ಹತ್ತು ಹಲವು ಕಾರ್ಯಕ್ರಮಗಳಿಗೆ ನಮ್ಮ ಸಂಸ್ಥೆ ಸದಾ ನೆರವು ನೀಡಲಿದೆ “ಎಂದರು.

    ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರದ ಈ.ಸಿ.ಓ ರಾಜಾ ಖಾರ್ವಿ, ಕುಂದಾಪುರ ಪ್ರೌಢ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಶೇಖರ ಪೂಜಾರಿ, ಸರಕಾರಿ ಪ್ರೌಢ ಶಾಲೆ ಹೆಸ್ಕೂತ್ತೂರಿನ ಮುಖ್ಯ ಶಿಕ್ಷಕರಾದ ಅಬ್ದುಲ್ ರಹೂಫ್ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ. ಸ್ವಾಗತಿಸಿ, ಕುಂದಾಪುರ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಅಜಯ್ ಕುಮಾರ್ ಶೆಟ್ಟಿ ವಂದಿಸಿದರು. ಶಿಕ್ಷಕ ಸಂತೋಷ ಕುಮಾರ್ ಕೋಟ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    6 + 10 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.