Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ: ಡಾ. ಎಂ.ಟಿ ರೇಜು
    ಉಡುಪಿ ಜಿಲ್ಲೆ

    ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ: ಡಾ. ಎಂ.ಟಿ ರೇಜು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕುವ ಕಾರ್ಯಗಳನ್ನು ಯಾವುದೇ ಲೋಪದೋಷಗಳಿಲ್ಲದಂತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮತದಾರರ ಪಟ್ಟಿಯ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವು ಚುನಾವಣೆ ಆಯೋಗದ ಸೂಚನೆ ಮೇರೆಗೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಒಂದು ತಿಂಗಳ ಕಾಲ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಂದ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರನ್ನು ತೆಗೆದು ಹಾಕುವಂತಹ ಡೇಟಾವನ್ನು ಪರಿಶೀಲಿಸಲು ಮನೆಗಳಿಗೆ ಭೇಟಿ ನೀಡುತ್ತಾರೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳನ್ನು ನಿಯೋಜಿಸಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು.

    ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊರ ಜಿಲ್ಲೆಗಳಿಂದ ಉದ್ಯೋಗವನ್ನು ಅರಸಿ ಬಂದು ಇಲ್ಲಿಯೇ ವೃತ್ತಿಯನ್ನು ಕೈಗೊಂಡು ಕಳೆದ ನಾಲ್ಕೈದು ವರ್ಷಗಳಿಂದ ವಾಸವಿರುವಂತವರ ಹೆಸರು ಸೇರ್ಪಡೆ ಮಾಡಬೇಕು. ಈ ಹಿಂದೆ ತಮ್ಮ ಸ್ವಂತ ಊರಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದಲ್ಲಿ ತೆಗೆದುಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

    18 ವರ್ಷ ತುಂಬಿದ ಅರ್ಹ ಪ್ರತಿಯೊಬ್ಬ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಅರ್ಹ ದಾಖಲೆಗಳನ್ನು ನೀಡಿ, ದಾಖಲಿಸಲು ಹಾಗೂ ವಿಶೇಷ ಮತದಾರರ ನೋಂದಣಿ ಆಂದೋಲನ ದಿನಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದ ಅವರು ಸರ್ವಿಸ್ ವೋಟರ್ಸ್ಗಳ ನೊಂದಣಿಗೂ ಸಹ ಆದ್ಯತೆ ನೀಡಬೇಕು ಎಂದರು.

    Click here

    Click here

    Click here

    Click Here

    Call us

    Call us

    ಆನ್‌ಲೈನ್ ಮೂಲಕ ಅಥವಾ ನೇರವಾಗಿ ಮತದಾರರ ನೋಂದಣಿ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಅರ್ಜಿಗಳನ್ನು ಸಲ್ಲಿಸಿದಾಗ ಅವುಗಳನ್ನು ವಿಳಂಬವಿಲ್ಲದೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು.

    ಜಿಲ್ಲೆಯ ಕೆಲವು ಮತಗಟ್ಟೆಗಳಲ್ಲಿ 1500 ಕ್ಕೂ ಹೆಚ್ಚಿನ ಮತಗಳಿದ್ದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪನೆಗೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳಿಸಬೇಕು ಎಂದು ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕೈಗೊಂಡಿರುವ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ತಾಲೂಕು ತಹಶೀಲ್ದಾರ್ ಗಳು, ವಿವಿಧ ಪಕ್ಷಗಳ ಏಜೆಂಟರುಗಳಾದ ಬಿಜೆಪಿಯ ಚಂದ್ರ ಶೇಖರ ಪ್ರಭು, ಕಾಂಗ್ರೆಸ್‌ನ ಬಿ. ಕುಶಲ್ ಶೆಟ್ಟಿ, ಜೆಡಿಎಸ್ ನ ರಾಮರಾವ್, ಸಿ.ಪಿ.ಐ ನ ಬಾಲಕೃಷ್ಣ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    thirteen − 6 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.