ಸಹಕಾರಿ ಸಂಘಗಳಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವಾಗಲಿ: ಶಾಸಕ ಗುರುರಾಜ ಗಂಟಿಹೊಳೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು: ಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡ ಮಟ್ಟದಲ್ಲಿ ವಿಸ್ತರಣೆಗೊಂಡರು, ಅವುಗಳಿಗೆ ಸವಾಲೆಸುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆ, ಸಹಕಾರಿರಂಗ ಗ್ರಾಮೀಣ ಜನರ ಒಡನಾಡಿಯಾಗಿ ಕೆಲಸಮಾಡುತ್ತಿದ್ದು ಇದು ಸಾಲಶೂಲಕ್ಕೆ ಬದಲಾಗಿ ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೊಸತನ ತಂದು ಅದರ ಲಾಭದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸುವ ಕೆಲಸಮಾಡಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

Call us

Click Here

ಭಾನುವಾರ ನಾಗೂರು ಲಲಿತಾಕೃಷ್ಣ ಸಭಾಭವನದಲ್ಲಿ ಕರ್ನಾಟಕ ಸಹಕಾರಿ ಮಹಾಮಂಡಲ ರಿ. ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಹಕಾರಿರಂಗವು ಸಹಕಾರ ಮತ್ತು ನಂಬಿಕೆಯ ಮೇಲೆ ನಡೆಯುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರಕ್ಕಿಂತಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬಿಗಿ ಕಾನೂನಿನ ಹಿಡಿತಕ್ಕೆ ಒಳಪಟ್ಟಿದೆ. ಸಂಘಗಳು ಬಡವರಿಗೆ ಹತ್ತಿರವಾಗಿ ಕೆಲಸಮಾಡಿ ಅವರ ನಿರೀಕ್ಷೆ ಹೆಚ್ಚಿಸಬೇಕು ಎಂದ ಅವರು ತನ್ನ ಲಾಭಾಂಶದಲ್ಲಿ ಪ್ರತಿಭಾ ಪುರಸ್ಕಾರ, ಸರ್ಕಾರಿ ಶಾಲಾ ಶಿಕ್ಷಕರಿಗೆ ಗೌರವಧನ ವಿತರಣೆ, ಸೇರಿದಂತೆ ನಾನಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಪ್ರತಿಭಾ ಪುರಸ್ಕಾರ ವಿತರಿಸಿ ಹಾಗೂ ಸಾಧಕರನ್ನು ಸನ್ಮಾನಿಸಿದರು. ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್. ರಾಜ ಪೂಜಾರಿ, ಎಂ. ಮಹೇಶ್ ಹೆಗ್ಡೆ, ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷ ಶೇಖರ ಖಾರ್ವಿ, ಸಹಕಾರಿ ಸಂಘಗಳ ಉಪ ನಿಬಂದಕಿ ಲಾವಣ್ಯ ಕೆ.ಆರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕಿ ಲಲಿತಾಕ್ಷಿ, ವ್ಯವಸ್ಥಾಪಕ ವಿಶ್ವನಾಥ, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಮೋಹನ್ ಪೂಜಾರಿ, ಬಿ.ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.

ಕೋಟ ಶ್ರೀ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ನರೇಂದ್ರಕುಮಾರ್ ಕೋಟ ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆ ಎಂಬ ವಿಷಯದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು.

Click here

Click here

Click here

Click Here

Call us

Call us

ಈ ಸಂದರ್ಭ  ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಮಹಾಮಂಡಲದ ಶಿಕ್ಷಣನಿಗೆ 9,02,172 ಚೆಕ್‌ನ್ನು ವಿತರಿಸಲಾಯಿತು. ಇತ್ತೀಚಿಗೆ ನಿವೃತ್ತರಾದ ಶಿಕ್ಷಕ ಗಿರೀಶ್ ಶ್ಯಾನುಭಾಗ್ ಹಾಗೂ ಬೈಂದೂರು ಕ್ಷೇತ್ರ ಶಿಕ್ಷಣಾಕಾರಿ ಕಚೇರಿಯ ಸಿಬ್ಬಂದಿ ಗೋವಿಂದ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು, ಸಂಘದ ವ್ಯಾಪ್ತಿಯ ಸರ್ಕಾರಿ ಶಾಲಾ ಗೌರವ ಶಿಕ್ಷಕರಿಗೆ ಗೌರವಧನ ವಿತರಿಸಲಾಯಿತು.

ಸಂಘದ ಮುಖ್ಯ ಕಾರ್ಯನಿರ್ವಹಣಾಕಾರಿ ವಿಷ್ಣು ಪೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು, ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿ,  ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Leave a Reply