Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನಿಂದ ಕೊರಗ ಕುಟುಂಬಗಳಿಗೆ 14 ಮನೆ ಹಸ್ತಾಂತರ
    ಊರ್ಮನೆ ಸಮಾಚಾರ

    ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನಿಂದ ಕೊರಗ ಕುಟುಂಬಗಳಿಗೆ 14 ಮನೆ ಹಸ್ತಾಂತರ

    Updated:18/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    :  “12ನೇ ಶತಮಾನದಲ್ಲಿ ಬಸವಣ್ಣ ಕಂಡ ಸಮಾಜ ಸುಧಾರಣೆ ಕನಸು ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿಯಲ್ಲಿ ಸಮಾಜಸೇವಕ ಎಚ್.ಎಸ್.ಶೆಟ್ಟಿ ಮೂಲಕ ಸಾಕಾರಗೊಂಡಿದೆ. ಕೊರಗ ಸಮಾಜದ 14 ಕುಟುಂಬಗಳಿಗೆ ತಲಾ 14 ಲಕ್ಷ ರೂ. ವೆಚ್ಚದಲ್ಲಿ ಅವರು ನಿರ್ಮಿಸಿರುವ 14 ಮನೆಗಳು ಕೊರಗ ಸಮಾಜದ ಪರಿವರ್ತನೆಗೆ ದಿಕ್ಯೂಚಿಯಾಗಲಿದೆ,” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌. ಮುನಿಯಪ್ಪ ನುಡಿದರು.

    Click Here

    Call us

    Click Here

    ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಜನ್ನಾಡಿ ಮತ್ತು ಮಣಿಗೇರಿ ಕೊರಗರ ಕಾಲೊನಿಯಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊರಗ ಕುಟುಂಬಗಳಿಗೆ ನಿರ್ಮಿಸಿ ಕೊಟ್ಟಿರುವ ಮನೆಗಳ ಹಸ್ತಾಂತರ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

    “ಉಡುಪಿ ಪೇಜಾವರ ಮಠದ ಯತಿಗಳಮಾರ್ಗದರ್ಶನದಲ್ಲಿ ಮನೆ ನಿರ್ಮಾಣಗೊಂಡಿರುವುದು ಸಂತಸ ನೀಡಿದೆ. ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರು 18 ವರ್ಷ ಹಿಂದೆ ಚನ್ನಪಟ್ಟಣದಲ್ಲಿ ದಲಿತ ಕೇರಿಯಲ್ಲಿ ಸಹಭೋಜನಕ್ಕೆ ಚಾಲನೆ ನೀಡಿ ಕ್ರಾಂತಿ ಮಾಡಿದ್ದರು. ಅವರ ಹೆಜ್ಜೆಯಲ್ಲೇ ಈಗಿನ ಯತಿಗಳು ಸಾಗುತ್ತಿದ್ದಾರೆ. ಸರಕಾರದಿಂದ ಸಾಧ್ಯವಾಗದ ಕೆಲಸವನ್ನು ಸ್ವಾಮೀಜಿ ಮಾರ್ಗದರ್ಶನದಲ್ಲಿ ಸಮಾಜಸೇವಕ ಡಾ.ಎಚ್.ಎಸ್.ಶೆಟ್ಟಿ ಮಾಡಿದ್ದಾರೆ. ಮಠಗಳು, ಸಮಾಜದ ಸಿರಿವಂತರು ತಮ್ಮ ಹೆಚ್ಚುವರಿ ಹಣವನ್ನು ಅನವಶ್ಯಕ ವ್ಯಯಿಸುವ ಬದಲು ಸಮಾಜದಲ್ಲಿ ತಳಮಟ್ಟಕ್ಕೆ ತಳ್ಳಲ್ಪಟ್ಟ ಸಮಾಜಗಳ ಕಲ್ಯಾಣಕ್ಕೆ ಬಳಕೆ ಮಾಡಿದಲ್ಲಿ ರಾಮರಾಜ್ಯದ ಕನಸು ಸಾಕಾರಗೊಳ್ಳಲಿದೆ,”  ಎಂದರು.

    ಉಡುಪಿ ಪೇಜಾವರ ಮಠದ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಸ್ತಾಂತರಿತ ಪ್ರತಿ ಕೊರಗ ಮನೆಯಲ್ಲೂ ಗೃಹಪೂಜೆ ನೆರವೇರಿಸಿ ಆಶೀರ್ವಚನ ನೀಡಿ, “ಪ್ರತಿ ಮನೆಯೂ ರಾಮನ ಮನೆಯಾಗಿದೆ. ರಾಮಭಕ್ತಿ ಬೇರೆಯಲ್ಲ, ದೇಶಭಕ್ತಿ ಬೇರೆಯಲ್ಲ. ಆಸರೆ ಇಲ್ಲದವರಿಗೆ, ಅಶಕ್ತರಿಗೆ ಮನೆ ನಿರ್ಮಿಸಿಕೊಡುವ ಮೂಲಕ ಪ್ರತಿ ಮನೆಯಲ್ಲೂ ರಾಮಮಂದಿರ ಕಾಣ ಬಯಸುತ್ತಿದ್ದೇವೆ. ಸ್ವಂತ ನೆಲೆಯಲ್ಲಿ 5-6 ಮನೆ ನಿರ್ಮಿಸಿಕೊಟ್ಟಿದ್ದ ನನ್ನ ಉದ್ದೇಶಕ್ಕೆ ಜೀವ ತುಂಬಿದವರು ಡಾ.ಎಚ್. ಎಸ್.ಶೆಟ್ಟಿ ಅವರು. ಕೊರಗರ ಕಾಲೊನಿಯಲ್ಲಿ ಹೊಸ ಬೆಳಕು ಮೂಡಿದೆ,” ಎಂದು ಸಂತಸ ವ್ಯಕ್ತಪಡಿಸಿದರು.

    ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ  ಪ್ರವರ್ತಕ ಡಾ. ಎಚ್.ಎಸ್.ಶೆಟ್ಟಿ ಮಾತನಾಡಿ, ”ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ವೇಳೆ ಪಾಲ್ಗೊಂಡಿದ್ದ ನನಗೆ ಪೇಜಾವರ ಯತಿಗಳು ನೀಡಿದ ಮಾರ್ಗದರ್ಶನದಿಂದ ಈ ಕಾರ್ಯ ಸಾಕಾರಗೊಂಡಿದೆ. 80 ಸಾವಿರ ವರ್ಷಗಳಿಗೂ ಮಿಕ್ಕಿ ಇತಿಹಾಸ ಹೊಂದಿರುವ ಕೊರಗ ಸಮಾಜ ಇಂದು ವಿನಾಶದಂಚಿನಲ್ಲಿದೆ. ಅವರ ಜೀನ್‌ನಲ್ಲಿ ದೈವಿಕತೆಯಿದೆ. ಬದಲಾದ ಪರಿಸ್ಥಿತಿಯಲ್ಲಿ ಅವರ ಮೂಲ ನೆಲೆ ಅಭದ್ರತೆ ಎದುರಿಸುತ್ತಿದ್ದು ಅವರು ಸಹ ಅಭದ್ರತೆಯಲ್ಲಿದ್ದಾರೆ. ಪ್ರತಿ ಮನೆಗೂ 18 ಲಕ್ಷ ವೆಚ್ಚವಾಗಿದೆ. 100 ಮನೆ ನಿರ್ಮಿಸಿಕೊಡುವುದು ನನ್ನ ಮುಂದಿನ ಗುರಿ,” ಎಂದರು.

    Click here

    Click here

    Click here

    Click Here

    Call us

    Call us

    ಸಂಸದ ಕೋಟ ಶ್ರೀನಿವಾಸ ಪೂಜಾರಿ ಫಲಾನುಭವಿಗಳಿಗೆ ಮನೆಯ ಕೀಲಿ ಕೈ ವಿತರಿಸಿದರು. ಶಾಸಕ ಕಿರಣ್‌ ಕುಮಾರ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು.

    ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯ ಕೊರಗಾಭಿವೃದ್ಧಿ ಸಂಸ್ಥೆಗಳ ಅಧ್ಯಕ್ಷೆ ಸುಶೀಲ ನಾಡ, ಕೊರಗ ಶ್ರೇಯೋಭಿವೃದ್ಧಿ ಸಮಿತಿ ಅಧ್ಯಕ್ಷ ಕುಮಾರದಾಸ, ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಉಪಯೋಜನೆಯ ನಿರ್ದೇಶಕ ಗುರುನಾಥ್, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ, ಉದ್ಯಮಿಗಳಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಹಾಲಾಡಿ ಸರ್ವೋತ್ತಮ ಹೆಗ್ಡೆ ಶಂಕರ ಹೆಗ್ಡೆ, ಹಾರ್ದಳ್ಳಿ-ಮಂಡಳ್ಳಿ ಗ್ರಾಪಂ ಅಧ್ಯಕ್ಷೆ ದೀಪಾ ಶೆಟ್ಟಿ, ಟ್ರಸ್ಟ್‌ನ ಉಪಾಧ್ಯಕ್ಷ ನಾಗರಾಜ ಶೆಟ್ಟಿ ಕಾರ್ಯದರ್ಶಿ ಡಾ.ಸುಮನಾ ಶೆಟ್ಟಿ ಮೊಳಹಳ್ಳಿ ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

    ಮುರಳಿ ಕಡೇಕಾರ್ ಸ್ವಾಗತಿಸಿದರು. ಉಪನ್ಯಾಸಕ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    19 − 7 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.