ನ .19 ರಿಂದ ಡಿ. 10 ರವೆರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ,.
ಉಡುಪಿ:
ನವೆಂಬರ್ 19 ರಿಂದ ಡಿಸೆಂಬರ್ 10 ರವೆರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಚರಣೆ ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ಪ್ರತಿನಿತ್ಯ ನಿರಂತರವಾಗಿ ಶೌಚಾಲಯಗಳನ್ನು ಬಳಸುವಂತೆ ಜನಸಾಮಾನ್ಯರಿಗೆ ಪ್ರೇರೇಪಿಸುವ ಉದ್ದೇಶದಿಂದ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ವಿಶ್ವ ಶೌಚಾಲಯ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಪ್ರಸಕ್ತ ವರ್ಷ ನಮ್ಮ ಶೌಚಾಲಯ ನಮ್ಮ ಗೌರವ ಎಂಬ ಶೀರ್ಷಿಕೆ ಹಾಗೂ ಅಂದದ ಶೌಚಾಲಯ  ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ನವೆಂಬರ್ 19 ರಿಂದ ಡಿಸೆಂಬರ್ 10 ರ ವರೆಗೆ ವಿಶೇಷ ಆಂದೋಲನವನ್ನು ಆಯೋಜಿಸಲಾಗಿದೆ ಎಂದರು.

ಅಭಿಯಾನದ ಮುಖ್ಯ ಉದ್ದೇಶ ವೈಯಕ್ತಿಕ ಮತ್ತು ಸಮುದಾಯ ಶೌಚಾಲಯಗಳ ಬಳಕೆ ಹೆಚ್ಚಿಸುವುದು ಮತ್ತು ಸುಸ್ಥಿರತೆ ಕಾಪಾಡುವುದು. ಈ ಸ್ಥಳಗಳನ್ನು ವರ್ಣ ರಂಜಿತ ಸ್ಥಳಗಳಗಿ ಪರಿವರ್ತಿಸಲು ಚಿತ್ರಕಲೆ ಬಿಡಿಸುವುದು, ನಿರುಪಯುಕ್ತ ಶೌಚಾಲಯಗಳನ್ನು ದುರಸ್ತಿ ಮಾಡಿ ಬಳಕೆಗೆ ಯೋಗ್ಯ ರೀತಿಯಲ್ಲಿ ಪರಿವರ್ತಿಸುವುದು ಸೇರಿದಂತೆ ಎಲ್ಲ ಶೌಚಾಲಯಗಳು ಕ್ರಿಯಾತ್ಮಕವಾಗಿದೆ ಹಾಗೂ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಆಗಿರುತ್ತದೆ ಎಂದರು.

Click here

Click here

Click here

Click Here

Call us

Call us

ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಶನ್ ಸಭೆಯನ್ನು ಆಯೋಜಿಸಿ, ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ರೂಢಿಸುವ ನಿಟ್ಟಿನಲ್ಲಿ ಜನರ ನಡುವಳಿಕೆಗಳನ್ನು ಬದಲಾವಣೆ ಮಾಡುವ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುವುದು ಎಂದರು. ತಾಲ್ಲೂಕುಪಂಚಾಯಿತಿಗಳಲ್ಲಿ ಶಿಫಾರಸ್ಸುಗೊಂಡ ಅತ್ಯುತ್ತಮ ಗೃಹ ಶೌಚಾಲಯಗಳ ಪೈಕಿ 5ನ್ನು ಆಯ್ಕೆ ಮಾಡುವುದು ಹಾಗೂ ಸಮುದಾಯ ಶೌಚಾಲಯಗಳ ಪೈಕಿ 5ನ್ನು ಆಯ್ಕೆ ಮಾಡಿ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ನ ಅಧ್ಯಕ್ಷರು, ಸದಸ್ಯರು, ಪಿಡಿಓ ಗಳು ಹಾಗೂ ಸಿಬ್ಬಂದಿಗಳು ಜನಸಾಮಾನ್ಯರಲ್ಲಿ ಶೌಚಾಲಯದ ಬಳಕೆಯ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅವರುಗಳು ಬಳಸುವಂತೆ ನೋಡಿ ಕೊಳ್ಳಬೇಕು ಎಂದರು.

ಶಾಲಾ ಮಟ್ಟದಲ್ಲಿ ವಾಷ್‌ಟಬ್‌ಗಳನ್ನು ಪ್ರಾರಂಭಿಸಿ, ಮಕ್ಕಳಲ್ಲಿಯೂ ಸಹ ಶೌಚಾಲಯಗಳ ಬಳಕೆಯ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳ ಪ್ರಮಾಣಕ್ಕೆ ಅನುಗುಣವಾಗಿ ಶೌಚಾಲಯ ಗಳು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಶಾಲೆಗಳಲ್ಲಿ ಶೌಚಾಲಯಗಳು ಹಾಳಾಗಿದ್ದಲ್ಲಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ವಿಶೇಷ ಆಂದೋಲನ ಅಂಗವಾಗಿ ಎಲ್ಲ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಶೌಚಾಲಯ ಬಳಕೆ ಕುರಿತು ಸಮೀಕ್ಷೆ ನಡೆಸಲಾಗುವುದು. ಗೃಹ ಶೌಚಾಲಯಗಳನ್ನು ನಿರಂತರವಾಗಿ ಬಳಸುವ ಫಲಾನುಭವಿಗಳನ್ನು ಗುರುತಿಸಿ ಬಹುಮಾನ ನೀಡಿ ಗೌರವಿಸಲಾಗುವುದು. ಸ್ಪರ್ಧೆ ಆಯೋಜಿಸಿ ಅತ್ಯುತ್ತಮ ವೈಯಕ್ತಿಕ ಗೃಹ ಶೌಚಾಲಯಗಳನ್ನು ಗುರುತಿಸಿ ಜಿಲ್ಲಾ ಮಟ್ಟದ ಸ್ಪರ್ಧೆ ಕಳುಹಿಸಿಕೊಡಲಾಗುವುದು ಎಂದರು.

ಸ್ವಚ್ಛತಾ ಕಾರ್ಮಿಕರಿಗೆ ವಿಶೇಷ ಶಿಬಿರ ಆಯೋಜಿಸಲಾಗುವುದು. ಶೌಚಾಲಯ ರಹಿತ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೌಚಾಲಯ ನಿರ್ಮಾಣಕ್ಕೆ  ಕ್ರಮವಹಿಸಲಾಗುವುದು. ಸಮುದಾಯ ಶೌಚಾಲಯಗಳನ್ನು ಶುಚಿತ್ವಗೊಳಿಸಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲು ಹಾಗೂ ಅವುಗಳ ಸೌಂದರ್ಯೀಕರಣಕ್ಕೆ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದರು.

ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳು ಶೌಚಾಲಯ ಆಂದೋಲನಕ್ಕೆ ಸಹಯೋಗ ನೀಡಲಿವೆ. ಶೌಚಾಲಯ ಇಲ್ಲದಿರುವ ಆಸ್ಪತ್ರೆ, ಅಂಗನವಾಡಿ ಹಾಗೂ ಶಾಲೆಗಳನ್ನು ಪಟ್ಟಿ ಮಾಡಿ ಶೌಚಾಲಯ ನಿರ್ಮಾಣಕ್ಕೆ ಕ್ರಮವಹಿಸಲಿವೆ. ಈಗಾಗಲೇ ಇರುವ ಶೌಚಾಲಯಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಲಿವೆ. ರೋಗಿಗಳು, ಮಕ್ಕಳು ಹಾಗೂ ಹದಿ ಹರೆಯದವರಿಗೆ  ಅಂಗನವಾಡಿ, ಆಶಾ ಹಾಗೂ ಶಿಕ್ಷಕರು ಜಾಗೃತಿ ಮೂಡಿಸಲಿದ್ದಾರೆ. ಶಾಲೆಗಳಲ್ಲಿ ಈ ಕುರಿತು ನಾಟಕ, ಕಿರುಚಿತ್ರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದರೊಂದಿಗೆ ಸಾಮಾಜಿಕ ಜಾಣತಾಣಗಳಲ್ಲಿಯೂ ಶೌಚಾಲಯ ಆಂದೋಲನದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply