ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಜೂರು ಗ್ರಾಮದ ಹೊಳೆತೋಟ ಎಂಬಲ್ಲಿ ದೊಟ್ಟಮ್ಮಜ್ಜಿ ಕುಟುಂಬಕ್ಕೆ ನಿರ್ಮಿಸಿಕೊಡಲಾದ ʼಶ್ರೀ ವರಲಕ್ಷ್ಮೀ ನಿಲಯʼ ಉಚಿತ ಮನೆಯನ್ನು ಬುಧವಾರ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.
ನೂತನ ಗೃಹವನ್ನು ಹೊಸನಗರ ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಯೋಗೀಂದ್ರ ಸ್ವಾಮೀಜಿ ಅವರು ಉದ್ಘಾಟಿಸಿದರು. ಹೊಸದಿಗಂತದ ಸಿಇಓ ಪಿ.ಎಸ್. ಪ್ರಕಾಶ್ ಮನೆಯ ಕೀಲಿಕೈಯನ್ನು ಕುಟುಂಬಿಕರಿಗೆ ಹಸ್ತಾಂತರಿಸಿದರು.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಪ್ರಾಸ್ತಾವಿಕ ಮಾತನಾಡಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಶೈಕ್ಷಣಿಕ, ಸಾಮಾಜಿಕ ಧಾರ್ಮಿಕ ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಈ ತನಕ ಒಟ್ಟು 16 ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಹೊರರಾಜ್ಯಗಳಲ್ಲಿಯೂ ಟ್ರಸ್ಟ್ ಮೂಲಕ ವಿವಿಧ ಸೇವಾ ಕಾರ್ಯವನ್ನು ಮಾಡಲಾಗುತ್ತಿದೆ. ಸೇವೆಯಲ್ಲಿಯೇ ಆತ್ಮತೃಪ್ತಿ ಇದೆ ಎಂಬುದನ್ನು ಕಂಡುಕೊಂಡಿದ್ದೇನೆ ಎಂದರು.
ಈ ವೇಳೆ ನಿವೃತ್ತ ಮುಖ್ಯೋಪಧ್ಯಾಯ ವಿಶ್ವೇಶ್ವರ ಅಡಿಗ, ಬಿಜೆಪಿ ಬೈಂದೂರು ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳಾದ ಗೀತಾಂಜಲಿ ಸುವರ್ಣ, ಗೌರಿ ದೇವಾಡಿಗ ಉಪಸ್ಥಿತಿರಿದ್ದರು.
ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರೂಪಿಸಿ, ನಾಗರಾಜ ಪಿ. ಯಡ್ತರೆ ವಂದಿಸಿದರು.