ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ಇನ್ಸುಲೇಟರ್‌ ವಾಹನ ಡಿಕ್ಕಿ, ನಾಲ್ವರು  ಗಂಭೀರ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕುಂಭಾಶಿ ರಾ.ಹೆ. 66ರಲ್ಲಿ ಇನ್ನೋವಾ ಕಾರಿಗೆ ಹಿಂದಿನಿಂದ ಅತೀ ವೇಗವಾಗಿ ಬಂದ ಇನ್ಸುಲೇಟ‌ರ್ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Click Here

Call us

Click Here

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಕೇರಳ ಕಡೆಗೆ ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಬುಧವಾರ ಮಧ್ನಾಹ್ನದ ವೇಳೆಗೆ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ಬರುತ್ತಿದ್ದಂತೆ ಕಾರಿನಲ್ಲಿದ್ದವರು ದೇವಸ್ಥಾನಕ್ಕೆ ತೆರಳುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಅದರಂತೆ ಚಾಲಕ ಕಾರನ್ನು ಹಿಂದಕ್ಕೆ ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಗೋವಾದಿಂದ ಕೆರಳ ಕಡೆಗೆ ಸಾಗುತ್ತಿದ್ದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್‌ ವಾಹನ ಪಲ್ಟಿಯಾಗಿ ಬಿದ್ದಿದೆ.

ಸ್ಥಳೀಯರ ಸಹಕಾರದಿಂದ ಗಾಯಾಗಳುಗಳನ್ನು ತಕ್ಷಣ ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಗಂಭೀರ ಗಾಯಗೊಂಡ ನಾಲ್ವರನ್ನು ಮಣಿಪಾಲದ ಆಸ್ಪತ್ರೆಗೆ, ಸಣ್ಣಪುಟ್ಟ ಗಾಯಗೊಂಡವರನ್ನು ಕೋಟೆಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ದೃಷ್ಯ ದೇವಸ್ಥಾನದ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

Leave a Reply