ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.